ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ: ಸಿಎಂ ಎಚ್ಚರಿಕೆ

ಬೆಂಗಳೂರು : ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಇಂದು ಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವು ಕಡೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿದೆ.

ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು,  ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಿಸಲು ಯತ್ನಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಅಜಿತ್ ರೈ ಗೆ ನ್ಯಾಯಾಂಗ ಬಂಧನ

ಮುಂದುವರೆದು ಮಾತನಾಡಿದ ಅವರು ಶೀಘ್ರದಲ್ಲೇ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ನಡೆಸಲಾಗುತ್ತದೆ. ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ, ಆದಷ್ಟು ಬೇಗ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Comments (0)
Add Comment