ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ 790 ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ 790 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 30, 2023 ಕೊನೆಯ ದಿನವಾಗಿದೆ.

ಈ ಸಂಬಂಧ ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಅಸಿಸ್ಟೆಂಟ್ ಲೋಕೋ ಪೈಲೆಟ್, ಟೆಕ್ನೀಶಿಯನ್, ಟ್ರೈನಿ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿರುವುದಾಗಿ ತಿಳಿಸಿದೆ.

ಹುದ್ದೆ ವಿವರ

ಅಸಿಸ್ಟೆಂಟ್ ಲೋಕೋ ಪೈಲೆಟ್-234 ಹುದ್ದೆಗಳು

ಟ್ರೈನಿ ಮ್ಯಾನೇಜರ್-27 ಹುದ್ದೆಗಳು

ಜ್ಯೂನಿಯರ್ ಇಂಜಿನಿಯರ್ -168 ಹುದ್ದೆಗಳು

ಟೆಕ್ನಿಷಿಯನ್- 361 ಹುದ್ದೆಗಳು

ವಿದ್ಯಾರ್ಹತೆ

ನೈರುತ್ಯ ರೈಲ್ವೆಯಿಂದ ಹೊರಡಿಸಲಾಗಿರುವಂತ ಅಸಿಸ್ಟೆಂಟ್ ಲೋಕೋ ಪೈಲಟ್ ಹಾಗೂ ಟೆಕ್ನಿಶಿಯನ್ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಮತ್ತು ಐಟಿಐ, ಪದವಿ ನಿಗದಿಪಡಿಸಲಾಗಿದೆ. ಜ್ಯೂನಿಯರ್ ಇಂಜಿನಿಯರಿಂಗ್ ಹುದ್ದೆಗಳಿಗೆ ಡಿಪ್ಲೋಮಾ ಪದವಿ, ಟೆಕ್ನಿಶಿಯನ್ ಹುದ್ದೆಗೆ ಪದವಿಯನ್ನು ನಿಗದಿಪಡಿಸಲಾಗಿದೆ.

ವಯೋಮಿತಿ

ಗರಿಷ್ಠ ವಯೋಮಿತಿ 42 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ, ಎಸ್ಟಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಕೆ ವಿಧಾನ: ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು www.rrcmas.in ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ಆಯ್ಕೆ ವಿಧಾನ

ನೈರುತ್ಯ ರೈಲ್ವೆ ಇಲಾಖೆಯ ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ಬಹು ಆಯ್ಕೆ ಮಾದರಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಬಳಿಕ ಆಯ್ಕೆಯಾದ ಅರ್ಹ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಬಳಿಕ ನೇಮಕಾತಿ ಆದೇಶ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 30-08-2023 ಆಗಿರುತ್ತದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತ ಪ್ರಶ್ನೆಗಳಿಗಾಗಿ 044-28213185 ಸಂಖ್ಯೆಗೆ ಬೆಳಿಗ್ಗೆ 10 ರಿದಂ ಸಂಜೆ 5 ಗಂಟೆಯ ಒಳಗಾಗಿ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

Applications invited for 790 vacancies in South Western Railway Department
Comments (0)
Add Comment