‘ಪಕ್ಷದ ನಾಯಕರಾಗಿ ಕೆಲಸ ಮಾಡುವವರಿಂದ ಇಂತಹ ಮಾತು ಬರಬಾರದಿತ್ತು’- ಎಂಬಿ ಪಾಟೀಲ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಬಿಕೆ ಹರಿಪ್ರಸಾದ್ ಅವರ ನಡೆ ಬಗ್ಗೆ ಪಕ್ಷವು ಗಮನಿಸುತ್ತಿದ್ದು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಹರಿಪ್ರಸಾದ್ ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ ಕೆಲಸ ಮಾಡಿರುವವರು. ಅವರಿಂದ ಇಂತಹ ಮಾತು ಬರಬಾರದಿತ್ತು. ಅವರ ಮಾತುಗಳನ್ನು ಕೇಳಿಸಿಕೊಂಡು ಪಕ್ಷದ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ ಎಂದಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ವೇಣುಗೋಪಾಲ್ ಎಲ್ಲರೂ ಹರಿಪ್ರಸಾದ್ ಅವರಿಗೆ ಆತ್ಮೀಯರು. ಹೀಗಿರುವಾಗ ಅವರು ಎಲ್ಲ ವಿಚಾರಗಳನ್ನೂ ಪಕ್ಷದ ಒಳಗೇ ಮಾತನಾಡಬೇಕಿತ್ತು. ಆದರೆ ಅವರು ಬೀದಿಗೆ ಹೋಗಿದ್ದಾರೆ. ಇದು ಸರಿಯಲ್ಲ. ಇದರ ಪರಿಣಾಮಗಳನ್ನು ಅವರು ಎದುರಿಸಬೇಕಾಗುತ್ತದೆ ಎಂದಿದ್ದಾರೆ.

Comments (0)
Add Comment