ಪಾಕ್‌ನಲ್ಲಿ ಘೋರ ಕೃತ್ಯ – ಕುಟುಂಬ ನಿರ್ವಹಣೆ ಸಾಧ್ಯವಾಗದೇ ಪತ್ನಿ ಏಳು ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಕೊಂದ ಪತಿ

ಲಾಹೋರ್ : ಪಾಕಿಸ್ತಾನದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಏಳು ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘೋರ ಘಟನೆ ನಡೆದಿದೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಆ ವ್ಯಕ್ತಿ ತನ್ನ ಕುಟುಂಬವನ್ನು ಸಾಕಲು ಸಾಧ್ಯವಾಗದ ಕಾರಣ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಸಜ್ಜಾದ್ ಖೋಖರ್ ಎಂಬ ಕಾರ್ಮಿಕ ತನ್ನ ಪತ್ನಿ ಕೌಸರ್ (42) ಮತ್ತು ಅವರ ಏಳು ಮಕ್ಕಳ ಮೇಲೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಹಣಕಾಸಿನ ಆರ್ಥಿಕ ಒತ್ತಡದಿಂದಾಗಿ ವ್ಯಕ್ತಿ ಮಾನಸಿಕವಾಗಿ ಕುಗ್ಗಿದ್ದನು, ಆಗಾಗ್ಗೆ ತನ್ನ ಹೆಂಡತಿಯೊಂದಿಗೆ ಜಗಳವಾಡುತ್ತಿದ್ದನು ಎಂದು ಪೊಲೀಸರು ಹೇಳಿದ್ದಾರೆ.

ಪ್ರಕರಣ ಸಂಬಂಧ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತನ ಕುಟುಂಬದ ಕೊಲೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆತ ತಾನು ಮಾಡಿರುವ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ತನ್ನ ಹೆಂಡತಿ ಮತ್ತು ಏಳು ಮಕ್ಕಳನ್ನು ಕೊಂದಿದ್ದಾಗಿ ವ್ಯಕ್ತಿ ಒಪ್ಪಿಕೊಂಡಿದ್ದಾನೆ ಮತ್ತು ಇನ್ನು ಮುಂದೆ ತನ್ನ ಕುಟುಂಬವನ್ನು ಪೋಷಿಸಲು ಸಾಧ್ಯವಾಗದ ಕಾರಣ ಹಾಗೆ ಮಾಡಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Comments (0)
Add Comment