ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಂಬಳ – ಅಶೋಕ್ ರೈ ನೇತೃತ್ವದಲ್ಲಿ ಸ್ಥಳ ಪರಿಶೀಲನೆ

ಬೆಂಗಳೂರು: ತುಳುನಾಡಿನ ಅನೇಕ ಕಡೆಗಳಲ್ಲಿ ಪ್ರತಿವರ್ಷ ವಿಜೃಂಭನೆಯಿಂದ ನಡೆಸುವ ಜನಪದ ಕಲೆಯಾದ ಕಂಬಳವನ್ನು ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದ್ದು, ಈ ಕಂಬಳದ ಉಸ್ತುವಾರಿಯನ್ನು ಉಪ್ಪಿನಂಗಡಿ ವಿಜಯ- ವಿಕ್ರಮ ಜೋಡುಕರೆ ಕಂಬಳದ ರೂವಾರಿ ಹಾಗೂ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರು ವಹಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಬಾರಿ ಕಂಬಳ ನಡೆಸುತ್ತಿರುವ ಹಿನ್ನಲೆಯಲ್ಲಿ ಶಾಸಕರಾದ ಅಶೋಕ್ ರೈ ನೇತೃತ್ವದ ಕಂಬಳ ನಿಯೋಗವು ಶುಕ್ರವಾರ ಅರಮನೆ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಕಂಬಳದ ಕರೆ ನಿರ್ಮಾಣಕ್ಕಾಗಿ ಸ್ಥಳವನ್ನು ಗುರುತಿಸುವ ಕಾರ್ಯ ಈಗಾಗಲೇ ಪೂರ್ಣಗೊಂಡಿದ್ದು ಮುಂದಿನ ವಾರ ಕರೆ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಅಶೋಕ್‌ ಕುಮಾರ್‌ ರೈ ಮಾಹಿತಿ ನೀಡಿದ್ದಾರೆ.

ಈ ಸಂಧರ್ಭದಲ್ಲಿ ಸಂಗೀತ ನಿರ್ದೇಶಕರಾದ ಗುರುಕಿರಣ್, ಬೆಂಗಳೂರು ತುಳು ಒಕ್ಕೂಟದ ಅಧ್ಯಕ್ಷರಾದ ಸುಂದರ್‌ ರಾಜ್ ರೈ, ಉದ್ಯಮಿಗಳಾದ ಗುಣರಂಜನ್ ಶೆಟ್ಟಿ, ಬೆಂಗಳೂರು ಲಿಕ್ಕರ್ ಎಸೋಶಿಯೇಶನ್ ಉಪಾಧ್ಯಕ್ಷರಾದ ಕರುಣಾಕರ್ ಹೆಗ್ಡೆ, ಅಕ್ಷಯ ರೈ ದಂಬೆಕಾನ, ಉಮಾನಾಥ ಶೆಟ್ಟಿ ಪೆರ್ನೆ, ಮುರಳೀಧರ್ ರೈ ಮಠಂತಬೆಟ್ಟು, ರಾಜ್‌ಕುಮಾರ್ ರೈ, ರಾಕೇಶ್ ರೈ ಕುದ್ರಾಡಿ, ಪ್ರಶಾಂತ್ ರೈ ಕೈಕಾರ, ಮಂಜುನಾಥ ಕನ್ಯಾಡಿ, ಕರುಣಾಕರ ಸಾಮಾನಿ, ಶರತ್ , ರಾಜೇಶ್ ಶೆಟ್ಟಿ ಕೋಡಿಂಬಾಡಿ, ಯತೀಶ್ ಕನಕಪುರ, ಆದರ್ಶ ಶೆಟ್ಟಿ, ಪ್ರಣಾಮ್ ಶೆಟ್ಟಿ, ಅಶ್ವಿನ್ ಪೂಜಾರಿ , ದೀಕ್ಷಿತ್ ಮೊದಲಾದವರು ಉಪಸ್ಥಿತರಿದ್ದರು.

Comments (0)
Add Comment