ಬೆಂಗಳೂರು : ಜನ‌ ನನ್ನ ಬಳಿ ಬರೋದಾದ್ರೆ ಅಧಿಕಾರಿಗಳಿರೋದ್ಯಾಕೆ? – ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು : ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಆಯಾ ತಾಲೂಕಿನ ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸಿ ಸಚುವರು ಮತ್ತು ಶಾಸಕರ ನಡುವಿನ ಕಂದಕವನ್ನು ಕಡಿಮೆ ಮಾಡಲೆತ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಇಂದು ಸ್ಥಳೀಯ ಆಡಳಿತಾಧಿಕಾರಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಬಳಿಕ ಸಂಬಂದಸಿಸ ಇಲಾಖೆಗಳ ಅಧಿಕಾರಿಗಳಿಗೆ ಈ ಕೆಳಗಿನಂತೆ ಖಡಕ್ ಸೂಚನೆ ನೀಡಿದರು ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ. ಅಧಿಕಾರಿಗಳಿಗೆ ಸಿಎಂ ಸೂಚನೆಗಳು: ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಕಾರ್ಯನಿರ್ವಹಣಾಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ವಾರಕ್ಕೊಮ್ಮೆ ಜನ ಸಂಪರ್ಕ ಸಭೆಗಳನ್ನು ನಡೆಸಬೇಕು. ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು. ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ. ಜಿಲ್ಲಾಧಿಕಾರಿಗಳಿಗಳನ್ನು ತರಾಟೆಗೆಗೆ ತೆಗೆದುಕೊಂಡ‌ ಸಿಎಂ! ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಬಗೆಹರಿಸಬೇಕಾದ ಸಮಸ್ಯೆಗಳನ್ನು ಹೊತ್ತುಕೊಂಡು ಜನ ನನ್ನ ಬಳಿ ಬರುತ್ತಿದ್ದಾರೆ. ನೀವು ಸ್ಥಳೀಯವಾಗಿ ಜನ ಸಂಪರ್ಕ ಸಭೆ ನಡೆಸಿ ಸ್ಪಂದಿಸಿ ಸ್ಥಳದಲ್ಲೇ ಪರಿಹಾರ ಕೊಟ್ಟಿದ್ದರೆ ಹೀಗೆ ಆಗುತ್ತಿರಲಿಲ್ಲ ಅಂತಾ ಬೇಸರ ವ್ಯಕ್ತಪಡಿಸಿದರು. ಡಿಸಿಎಂ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟದ ಇತರ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Comments (0)
Add Comment