ಮಧು ಬಂಗಾರಪ್ಪರಿಂದ ನನಗೆ ಜೀವ ಬೆದರಿಕೆ- ಪ್ರಣವಾನಂದಶ್ರೀ ಆರೋಪ

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ನನಗೆ ಜೀವ ಬೆದರಿಕೆ ಇದೆ ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಮಧು ಬಂಗಾರಪ್ಪ ಬೆಂಬಲಿಗರು ಕರೆ ‌ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ. ಇವತ್ತು ಪೊಲೀಸ್ ‌ಕಮಿಷನರ್ ಭೇಟಿ ಮಾಡುತ್ತಿದ್ದು ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಹರಿಪ್ರಸಾದ್ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ. ಸಮುದಾಯಕ್ಕೆ ಮಧು ಬಂಗಾರಪ್ಪ ಕೊಡುಗೆ ಏನು ಎಂದು ಪ್ರಶ್ನಿಸಿದರು. . ನಾನು ಸಮುದಾಯದ ಭೂಮಿ ಕೊಳ್ಳೆ ಹೊಡೆದಿಲ್ಲ. ಸೈಟ್ ಮಾಡಿ ಮಾರಾಟ ಮಾಡಿಲ್ಲ. ಬಿ.ಕೆ ಹರಿಪಸ್ರಾದ್ ಭೂಮಿ ಕಳ್ಳತನ ಮಾಡಿದವರಲ್ಲ. ಈಡಿಗ ಸಮುದಾಯವನ್ನು ಸರ್ಕಾರವೇ ಒಡೆಯುತ್ತಿದೆ. ಸ್ವಾಮೀಗಳ ವಿರುದ್ಧ ಎತ್ತಿ ಕಟ್ಟುವ ಕೆಲಸ ಆಗುತ್ತಿದೆ ಎಂದು ಕಿಡಿಕಾರಿದ್ದಾರೆ.

ನನ್ನ ಡಿಎನ್ಎ ಬಗ್ಗೆ ನಿಮಗೆ ಏಕೆ ಬೇಕು. ನಾನು ಸ್ವಾಮೀಜಿ ಅಲ್ಲ ಅಂತ ಹೇಳಲು ಹಕ್ಕು ಕೊಟ್ಟವರು ಯಾರು. ಸಮುದಾಯಕ್ಕೆ ಅನ್ಯಾಯವಾದರೆ ಅದಕ್ಕೆ ನೀವೇ ಹೊಣೆ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.

ಈ ಕುರಿತು ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದು, ಪ್ರಣವಾನಂದಶ್ರೀ ಯಾಕೆ ಕಣ್ಣೀರು ಹಾಕಿದ್ದಾರೆ, ತಪ್ಪು ಮಾಡಿದ್ದಾರಾ? ಪ್ರಣವಾನಂದಶ್ರೀ ಇಂತಹ ಬುರುಡೆಗಳನ್ನ ಬಿಟ್ಟುಕೊಂಡೇ ಬಂದಿದ್ದಾರೆ. ಪ್ರಣವಾನಂದಶ್ರೀ ನಮ್ಮ ಸಮಾಜದವರೇ ಅಲ್ಲ. ಅವರೇನು ಈಡಿಗ ಸಮಾಜದವರಾ, ಅವರ ಹಿನ್ನೆಲೆ ಕೆದಕಿ ನಿಮಗೆ ಗೊತ್ತಾಗುತ್ತದೆ. ನನ್ನ ವಿರುದ್ಧ ಬೆಂಗಳೂರು ನಗರ ಪೊಲೀಸ್ ಕಮಿಷನರ್, ಸ್ಪೀಕರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಸೇರಿ ಯಾರಿಗೆ ಬೇಕಾದರೂ ದೂರು‌ ಕೊಡಲಿ ಎಂದು ತಿರುಗೇಟು ನೀಡಿದ್ದಾರೆ.

Comments (0)
Add Comment