‘ಮಹಿಳಾ ಮೀಸಲಾತಿ ವಿಧೇಯಕ ಕ್ರಾಂತಿಕಾರಿ ನಿರ್ಣಯ’- ಬೊಮ್ಮಾಯಿ

ಬೆಂಗಳೂರು: ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ವಿಧೇಯಕ್ಕೆ ಒಪ್ಪಿಗೆ ನೀಡಿರುವುದು ಒಂದು ಕ್ರಾಂತಿಕಾರಿ ನಿರ್ಣಯ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, 2009ರಲ್ಲಿ ಯುಪಿಎ ಅವಧಿಯಲ್ಲಿ ರಾಜ್ಯಸಭೆಯಲ್ಲಿ ಬಿಲ್ ಪಾಸ್ ಮಾಡಿತ್ತು. ಆದರೆ ಲೋಕಸಭೆಯಲ್ಲಿ ಯುಪಿಎ ಸದಸ್ಯ ಪಕ್ಷಗಳೇ ಒಪ್ಪಿರಲಿಲ್ಲ ಎಂದರು. ಇನ್ನು ಜನಸಂಖ್ಯೆಯಲ್ಲಿ 50%ರಷ್ಟಿರುವ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗುತ್ತಿರುವುದು ಒಂದು ಕ್ರಾಂತಿಕಾರಕ ನಡೆ.

ಕಾಂಗ್ರೆಸ್ ಇದರ ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿರುವುದು ವಿಪರ್ಯಾಸ. ಕೇವಲ ಮಸೂದೆ ಸಿದ್ಧಪಡಿಸುವುದು ಮಾತ್ರವಲ್ಲ. ಎಲ್ಲಾ ಪಕ್ಷಗಳನ್ನು ಒಪ್ಪಿಸಿ ಬಿಲ್ ಪಾಸ್ ಮಾಡುವುದು ಮುಖ್ಯ ಎಂದು ತಿಳಿಸಿದರು.

Comments (0)
Add Comment