ಮೃತಪಟ್ಟ ಶಿಕ್ಷಕಿ ಹೆಸರಿಗೆ 7 ಕೋಟಿ ತೆರಿಗೆ ನೋಟಿಸ್‌ – ಶಾಕ್‌ ಆದ ಕುಟುಂಬ

ಭೋಪಾಲ್ : ಮಧ್ಯಪ್ರದೇಶದ ಸರ್ಕಾರಿ ಶಾಲಾ ಶಿಕ್ಷಕರೊಬ್ಬರ ಹೆಸರಿಗೆ 7 ಕೋಟಿ ರೂ. ತೆರಿಗೆ ನೋಟಿಸ್‌ ಬಂದಿದೆ. ನೋಟಿಸ್‌ ಕಂಡು ಶಿಕ್ಷಕಿಯ ಕುಟುಂಬಸ್ಥರು ಶಾಕ್‌ ಆಗಿದ್ದಾರೆ. ಉಷಾ ಸೋನಿ ಎಂಬವರು ಪಟಖೇಡ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು. ಅವರು 2013 ಸಾವನ್ನಪ್ಪಿದ್ದಾರೆ. ಆದರೆ ನೋಟೀಸ್‌ ಕೋಡ್‌ 2017-18ರ ಮೌಲ್ಯಮಾಪನಕ್ಕೆ ಸಂಬಂಧಿಸಿದ್ದು ಎಂದು ಉಲ್ಲೇಖಿಸಲಾಗಿದೆ.

ಜುಲೈ 26 ರಂದು ಆಕೆಯ ಕುಟುಂಬಕ್ಕೆ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್‌ ಬಂದಿದ್ದು, 7.55 ಕೋಟಿ ತೆರಿಗೆ ಪಾವತಿಗೆ ಆದೇಶ ನೀಡಿತ್ತು.ಈ ಹಿನ್ನಲೆ ಶಿಕ್ಷಕಿ  ಅವರ ಮಗ ಪವನ್‌ ಸೋನಿ ʻನನ್ನ ತಾಯಿ 2013ರ ನವೆಂಬರ್‌ 16ರಂದೇ ದೀರ್ಘಕಾಲಿಕ ಅನಾರೋಗ್ಯದಿಂದ ನಿಧನರಾದರು. ಅಲ್ಲದೇ ಈ ನೋಟಿಸ್‌ 2017-18ರ ಮೌಲ್ಯ ಮಾಪನಕ್ಕೆ ಸಂಬಂಧಿಸಿದ್ದಾಗಿದೆ. ದಾಖಲೆಯಲ್ಲಿ ನ್ಯಾಚುರಲ್‌ ಕಾಸ್ಟಿಂಗ್‌ ಕಂಪನಿ ಎಂದು ಉಲ್ಲೇಖಿಸಲಾಗಿದೆ. ಅದು ಇನ್ನೂ ಖರೀದಿ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ನನ್ನ ತಾಯಿಯ ಪ್ಯಾನ್‌ಕಾರ್ಡ್‌ ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ನೋಟಿಸ್‌ ಬಗ್ಗೆ ನಮಗೇನು ತಿಳಿದಿಲ್ಲ ಎಂದಿದ್ದಾರೆ.

ಇದೇ ರೀತಿ  ಬೇತುಲ್‌ ಜಿಲ್ಲೆಯ 44 ಮಂದಿಗೆ 1 ರಿಂದ 10 ಕೋಟಿ ರೂ.ಗಳ ವರೆಗೆ ತೆರಿಗೆ ನೋಟೀಸ್‌ ಬಂದಿದೆ ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ.

Comments (0)
Add Comment