ವಾರಣಾಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭ

ಲಕ್ನೋ: ವಾರಣಾಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ತಂಡ ಆರಂಭಿಸಿದೆ.

ಮಸೀದಿ ಪರಿಶೀಲನೆಗೆ ಅವಕಾಶ ನೀಡಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧ ಮಸೀದಿ ಆಡಳಿತ ಸಮಿತಿ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ತಂಡ ಸಮೀಕ್ಷೆ ಆರಂಭಗೊಳಿಸಿದೆ.

ಇನ್ನು ಸಮೀಕ್ಷೆಯು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗಿದ್ದು, ಸೀಲ್ ಮಾಡಿದ ಶಿವಲಿಂಗದ ಆಕೃತಿ ಇರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಎಲ್ಲಾ ಪ್ರದೇಶಗಳಲ್ಲೂ ನಡೆಯಲಿದೆ.

ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಈ ತಪಾಸಣೆ ನಡೆಸಲಾಗುತ್ತಿದ್ದು, ಪುರಾತನ ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ನಂತರ ಜ್ಞಾನವಾಪಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.

Comments (0)
Add Comment