ವಿಪಕ್ಷ ನಾಯಕನ ಆಯ್ಕೆ ತೀರಾ ಕಷ್ಟವಾದಲ್ಲಿ ಕಾಂಗ್ರೇಸ್ ನ ಒಬ್ಬರನ್ನು ಔಟ್ ಸೋರ್ಸ್ ಮಾಡಿ ಎಂದ ನಾಗತಿಹಳ್ಳಿ ಚಂದ್ರಶೇಖರ್

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದು ನೂರು ದಿನಗಳು ಕಳೆದರೂ ಬಿಜೆಪಿ ಇನ್ನೂ ವಿಪಕ್ಷ ಸ್ಥಾನಕ್ಕೆ ಆಯ್ಕೆ ಮಾಡಲು ಸಾಧ್ಯವಾಗದ ಹಿನ್ನಲೆ ಇದೀಗ ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಒಂದು ಸಲಹೆಯನ್ನು ನೀಡಿದ್ದಾರೆ.

ವಿರೋಧ ಪಕ್ಷದ ನಾಯಕನ ಸ್ಥಾನದ ಕುರಿತಂತೆ ನಾಗತಿಹಳ್ಳಿ ಚಂದ್ರಶೇಖರ್ ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದು, ‘ಬಿಜೆಪಿಗೆ ಒಂದು ವಿನಮ್ರ ಸಲಹೆ. ವಿಪಕ್ಷ ನಾಯಕನಿಲ್ಲದೆ ವಿಧಾನ ಸಭೆ ಅಪೂರ್ಣ ಎನಿಸುತ್ತಿದೆ. ನಿಮಗೆ ಆಯ್ಕೆ ತೀರಾ ಕಷ್ಟವಾದಲ್ಲಿ ಕಾಂಗ್ರೆಸ್ ನಲ್ಲೇ ಸೂಕ್ತರಾದ ಒಬ್ಬರನ್ನು ಹುಡುಕಿ ವಿಪಕ್ಷ ನಾಯಕನ ಹುದ್ದೆಯನ್ನು ಔಟ್ ಸೋರ್ಸ್ ಮಾಡಿ’ ಎಂದು ಸಲಹೆ ನೀಡಿದ್ದಾರೆ.

Comments (0)
Add Comment