ಶಿವಮೊಗ್ಗ-ಚಿಕ್ಕಮಗಳೂರಲ್ಲಿ ಭಾರೀ ಮಳೆ ಆಗುವ ಸಾಧ್ಯತೆ.!

 

ಶಿವಮೊಗ್ಗ: ಶಿವಮೊಗ್ಗದಲ್ಲಿ ಗಾಳಿ, ಗುಡುಗು ಸಮೇತ ಮಳೆ  ಶುರುವಾಗಿದೆ. ಇಂದು ಕೂಡ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಏಪ್ರಿಲ್ 23ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದೆಡೆ ಒಣಹವೆ ಮುಂದುವರೆಯಲಿದೆ.

 

ಶಿವಮೊಗ್ಗ-ಚಿಕ್ಕಮಗಳೂರಲ್ಲಿ ಭಾರೀ ಮಳೆ ಆಗುವ ಸಾಧ್ಯತೆ.!
Comments (0)
Add Comment