ಸಂಸತ್ ಮುಂಗಾರು ಅಧಿವೇಶನ ಜುಲೈ 20 ರಿಂದ ಆರಂಭ; ‘ಏಕರೂಪ ನಾಗರಿಕ ಸಂಹಿತೆ’ ಮಸೂದೆ ಮಂಡನೆ ಸಾಧ್ಯತೆ

ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಜುಲೈ 20 ರಿಂದ ಆಗಸ್ಟ್ 11ರವರೆಗೆ ನಡೆಯಲಿದ್ದು, ಮಹತ್ವದ ‘ಏಕರೂಪ ನಾಗರಿಕ ಸಂಹಿತೆ’ ಮಸೂದೆಯನ್ನು ಈ ಬಾರಿಯ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಮಂಡನೆ ಮಾಡುವ ಸಾಧ್ಯತೆ ಇದೆ.

ಆನ್‍ಲೈನ್ ಗೇಮ್‍ನಿಂದ ಲಕ್ಷಾಂತರ ರೂ. ಕಳೆದುಕೊಂಡ ಶಿರಸಿ ಯುವಕ ಆತ್ಮಹತ್ಯೆಗೆ ಶರಣು

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಸೇರಿದಂತೆ ಕೆಲವೊಂದು ಮಸೂದೆಗಳನ್ನು ಮಂಡಿಸಲು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ. ಇದರ ಮಧ್ಯೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಟ ನಡೆಸಲು ಮುಂದಾಗಿರುವ ಪ್ರತಿಪಕ್ಷಗಳು, ಏಕರೂಪ ನಾಗರಿಕ ಸಂಹಿತೆ ಸೇರಿದಂತೆ ಕೇಂದ್ರ ಸರ್ಕಾರದ ಹಲವು ನೀತಿಗಳ ಕುರಿತು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಶ್ನಿಸಲು ತಯಾರಿ ನಡೆಸಿವೆ.

Comments (0)
Add Comment