ಸಿಸಿಬಿ ವಿಚಾರಣೆ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ – ಆಸ್ಪತ್ರೆಗೆ ದಾಖಲು

ಬೆಂಗಳೂರು: ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಅವರು ಸಿಸಿಬಿ ವಿಚಾರಣೆ ವೇಳೆ ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದು, 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ.

ಇನ್ನು ಕುಸಿದು ಬಿದ್ದಿ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಸದ್ಯ ತುರ್ತು ಚಿಕಿತ್ಸಾವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Comments (0)
Add Comment