ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ: ಕೇಂದ್ರ ಕಾರಾಗೃಹಕ್ಕೆ ಖ್ಯಾತ ಸಾಹಿತಿ!

ತಮಿಳುನಾಡು: ಮಣಿಪುರ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಖ್ಯಾತ ಸಾಹಿತಿ ಮತ್ತು ವಾಗ್ಮಿ ಬದ್ರಿ ಶೇಷಾದ್ರಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೆರಂಬಲೂರು ಜಿಲ್ಲೆಯ ಕುನ್ನಂ ಬಳಿಯ ಕಡೂರಿನ ವಕೀಲ ಕವಿಅರಸು ನೀಡಿದ ದೂರಿನ ಮೇರೆಗೆ ಈ ಬಂಧನ ನಡೆದಿದೆ. ದೂರಿನಲ್ಲಿ ಬದ್ರಿ ಶೇಷಾದ್ರಿ ಅವರು ಜನಪ್ರಿಯ ಯೂಟ್ಯೂಬ್ ಚಾನೆಲ್‌ನಲ್ಲಿ ನೀಡಿದ ಹೇಳಿಕೆಯನ್ನು ಎತ್ತಿ ತೋರಿಸಿದ್ದಾರೆ. ನಾವು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಕೈಗೆ ಬಂದೂಕು ಕೊಟ್ಟು ಮಣಿಪುರಕ್ಕೆ ಕಳುಹಿಸಬಹುದು. ಅವರು ಅಲ್ಲಿ ಶಾಂತಿಯನ್ನು ತರಬಹುದೇ?.. ಅದೊಂದು ಗುಡ್ಡಗಾಡು ಪ್ರದೇಶ. ಅಲ್ಲಿ ಕೊಲೆಗಳು ನಡೆಯುತ್ತದೆ ಎಂದು ಅವರು ಹೇಳಿದ್ದಾರೆ. ಈ ಹೇಳಿಕೆಗಳು ಶಾಂತಿ ಕದಡುವ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನು ಅವಮಾನಿಸುವಂತಿವೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ.
Comments (0)
Add Comment