ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹ : ಹೈಕೋರ್ಟ್ ನಲ್ಲಿ ಇಂದು ಪಿಐಎಲ್ ವಿಚಾರಣೆ

ಬೆಂಗಳೂರು: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ನಡೆದ ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ,ಪಾಂಗಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ ನಡೆಯುತ್ತಿರುವ ಹೋರಾಟದ ನಡುವೆ ಇಂದು ‌ಸೌಜನ್ಯರವರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಲಿದೆ.

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಗಿರೀಶ ಭಾರಧ್ವಾಜ್, ನವೀನ್ ಕುಮಾರ್ ನೆರಿಯ ಬೆಳ್ತಂಗಡಿ ಮತ್ತು ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪುತ್ತೂರು ಇವರು ಒಟ್ಟಾಗಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೆಪ್ಟೆಂಬರ್ 8ರಂದು ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ.

ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಲಿದ್ದಾರೆ.

Comments (0)
Add Comment