ಅಂತಿಮ ಕ್ಷಣದಲ್ಲಿ ಟೀಂ ಇಂಡಿಯಾದಿಂದ ಹೊರಬಿದ್ದ ಸ್ಟಾರ್ ಆಲ್ ರೌಂಡರ್..!! – ಕೊನೆಗೂ ಫೈನಲ್‌ ಆಯ್ತು ಆಟಗಾರರ ಲಿಸ್ಟ್..!!

ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಗಾಯಗೊಂಡಿದ್ದ ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಅಕ್ಷರ್ ಪಟೇಲ್ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಕನಿಷ್ಠ ಮೂರು ವಾರಗಳ ಅಗತ್ಯವಿರುವ ಕಾರಣ ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದಾರೆ.

ಅಕ್ಷರ್ ಪಟೇಲ್ ಬದಲಿಗೆ ಹಿರಿಯ ಸ್ಪಿನ್ನರ್ ಆರ್. ಅಶ್ವಿನ್ ಅಂತಿಮ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಅಶ್ವಿನ್ ಈಗಾಗಲೇ ತಂಡದೊಂದಿಗೆ ಗುವಾಹಟಿಗೆ ಪ್ರಯಾಣಿಸಿದ್ದು, ಗುವಾಹಟಿಯ ಬರ್ಸಪಾರಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡು ಅಭ್ಯಾಸ ಪಂದ್ಯಗಳು ನಡೆಯಲಿವೆ.

ಮೊದಲ ಪಂದ್ಯದಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಸೆಣಸಲಿದ್ದು ಬಳಿಕ ತಿರುವನಂತಪುರಂನ ಗ್ರೀನ್ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ತಮ್ಮ ಎರಡನೇ ಅಭ್ಯಾಸ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಆಡಳಿದೆ. ನಂತರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ವಿಶ್ವಕಪ್ 2023: ಭಾರತ ತಂಡ ಇಂತಿದೆ.!

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್

Comments (0)
Add Comment