ಅಕ್ರಮ ಮಾದಕ ವಸ್ತು ಮಾರಾಟ- ಮೂವರು ಆರೋಪಿಗಳು ಅರೆಸ್ಟ್‌

ಬೆಂಗಳೂರು: ಬೆಂಗಳೂರಿನಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ಹಾಗೂ ಓರಿಸ್ಸಾ ಮೂಲದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಓರಿಸ್ಸಾ ಮೂಲದ ಇಬ್ಬರು ಆರೋಪಿಗಳು ಕಳೆದ ಆರು ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು.
ಮಾರತ್ತಹಳ್ಳಿ ಮತ್ತು ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ತಳ್ಳುವ ಗಾಡಿಯಲ್ಲಿ ವಿವಿಧ ರೀತಿಯ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಇದರ ಜೊತೆಗೆ ಓರಿಸ್ಸಾದಿಂದ ಗಾಂಜಾ ತಂದು ಮಾರಾಟ ಮಾಡಲು ಆರಂಭಿಸಿದ್ದರು ಎನ್ನಲಾಗಿದೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿರುವ ಪೊಲೀಸರು ಆರೋಪಿಗಳನ್ನು ದಾಳಿ ನಡೆಸಿ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಮೂವರು ಆರೋಪಿಗಳಿಂದ ಸುಮಾರು 50 ಲಕ್ಷ ಮೌಲ್ಯದ ಡ್ರಗ್ ಜಪ್ತಿ ಮಾಡಲಾಗಿದೆ. 15ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇನ್ನೊಬ್ಬ ಆರೋಪಿ ವಿದೇಶಿ ಪ್ರಜೆಯಾಗಿದ್ದು, 2005ರಲ್ಲಿ ಬ್ಯುಸಿನೆಸ್ ವಿಸಾದಿಂದ ಬೆಂಗಳೂರಿಗೆ ಬಂದಿದ್ದ. ಪಾಸ್ ಪೋರ್ಟ್ ಅವಧಿ ಮುಗಿದರೂ ಬೆಂಗಳೂರಿನಲ್ಲಿ ವಾಸವಾಗಿ
ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್ ಮಾಡಲು ಆರಂಭಿಸಿದ್ದ ಎಂದು ತಿಳಿದು ಬಂದಿದೆ.

ಇದೀಗ ಆರೋಪಿಯನ್ನು ಬಂಧಿಸಿ ಪೊಲೀಸರು ಆತನಿಂದ 180 ಗ್ರಾಂ ಎಮ್ ಡಿ ಎಮ್ಎ, 58 ಗ್ರಾಮ್150 ಎಕ್ಸಟಸಿ ಪಿಲ್ಸ್ ನ್ನು ವಶಕ್ಕೆ ಪಡೆಯಲಾಗಿದೆ. ಎನ್ ಡಿ ಪಿಎಸ್ ಜೊತೆಗೆ ವಿದೇಶಿಯರ ಕಾಯ್ದೆ ಅಡಿಯಲ್ಲಿ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Comments (0)
Add Comment