‘ಅನಂತ್ ಕುಮಾರ್‌ ಹೆಗ್ಡೆಗೆ ಜನರೇ ಉತ್ತರ ಕೊಡ್ತಾರೆ’ – ಡಿಕೆಶಿ ವಾಗ್ದಾಳಿ

ಬೆಂಗಳೂರು: ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರಿಗೆ ಪಾಪ ಹೆಚ್ಚು ಕಮ್ಮಿ ಆಗಿದೆ. ಅವರಿಗೆ ಜನರೇ ಇದಕ್ಕೆ ಉತ್ತರ ಕೊಡ್ತಾರೆ ಎಂದು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಶಿರಸಿಯ ಸಿಪಿ ಬಜಾರ್ ನಲ್ಲಿರುವ ಮಸೀದಿ, ಅದು ವಿಜಯ ವಿಠ್ಠಲ ದೇವಸ್ಥಾನ, ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಕೂಡು ಮಾರುತಿ ದೇವಸ್ಥಾನ. ಇದೇ ರೀತಿ ದೇಶದ ಹಳ್ಳಿಯ ಮೂಲೆ-ಮೂಲೆಗಳಲ್ಲಿ ಅಪಮಾನಗೊಂಡಿರುವ ಅನೇಕ ಸಂಕೇತಗಳಿವೆ, ಅದನ್ನು ಕಿತ್ತುಹಾಕುವ ತನಕ ಹಿಂದೂ ಸಮಾಜ ಸುಮ್ಮನೆ ಕೂರಲ್ಲ. ಈಗ ರಣಭೈರವ ಎದ್ದಾಗಿದೆ. ಮತ್ತೆ ಕೂರುವ ಪ್ರಶ್ನೆಯೇ ಇಲ್ಲ. ಹಿಂದೂ ಧರ್ಮ ಯಾರ ಋಣವನ್ನು ಇಟ್ಟುಕೊಳ್ಳುವ ಧರ್ಮವಲ್ಲ, ಸಾವಿರ ವರ್ಷಗಳ ಸೇಡನ್ನು ತೀರಿಸಿಕೊಳ್ಳದಿದ್ದರೇ ಇದು ಹಿಂದೂ ರಕ್ತವೇ ಅಲ್ಲ ಎಂದು ಅನಂತ್ ಕುಮಾರ್ ಹೆಗ್ಡೆ ಹೇಳಿದ್ದರು.

ಇನ್ನು ಕಾಂಗ್ರೆಸ್ ನಮ್ಮ ವಿರೋಧಿ ಅಲ್ವೆ ಅಲ್ಲ, ಅವರು ಹಿಂದೂ ವಿರೋಧಿಗಳು, ಸನಾತನ ಧರ್ಮ ವಿರೋಧಿಗಳು. ಅಲ್ಪಸಂಖ್ಯಾತರ ವೋಟಿಗೆ ಹರಾಜಾಗಿ ಹೋದವರು ನಮ್ಮ ವಿರೋಧಿಗಳು ಎಂದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಡಿಕೆಶಿ, ಅನಂತ್ ಕುಮಾರ್ ಹೆಗ್ಡೆಗೆ ಪಾಪ ಹೆಚ್ಚು ಕಮ್ಮಿ ಆಗಿದೆ. ಪಾಪ ಅವರು ಇಷ್ಟು ದಿನ ಸ್ವಲ್ಪ ರೆಸ್ಟ್‍ನಲ್ಲಿ ಇದ್ದರು. ಅವರಿಗೆ ಜನರೇ ಇದಕ್ಕೆ ಉತ್ತರ ಕೊಡ್ತಾರೆ ಎಂದಿದ್ದಾರೆ.

Comments (0)
Add Comment