ಅನುಸೂಯ ಡಿ. ಗೆ ಡಾಕ್ಟರೇಟ್ ಪದವಿ

 

ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಅನುಸೂಯ ಡಿ. ಅವರು ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಸುಚೇತನವರತ್ನ ಅವರ ಮಾರ್ಗದರ್ಶನದಲ್ಲಿ ಕನ್ನಡ ಸಾಹಿತ್ಯದಲ್ಲಿ ಮಹಿಳಾ  ಚರಿತ್ರೆಗಳು : ಆಶಯ ಮತ್ತು ಅಭಿವ್ಯಕ್ತಿ ಎಂಬ ವಿಷಯ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಅನುಸೂಯ ಡಿ. ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿಯನ್ನು ನೀಡಿದೆ.

ಡಿ.10 ರಂದು ನಡೆದ ಹಂಪಿ ಕನ್ನಡ ವಿಶ್ವವಿದ್ಯಾಲಯದ ನುಡಿ ಹಬ್ಬ 32ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರಮಾಣ ಪತ್ರವನ್ನು ಪ್ರಧಾನ ಮಾಡಲಾಗುತ್ತದೆ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಟಿ ಪಿ ವಿಜಯ್ ಅವರು ತಿಳಿಸಿದ್ದಾರೆ.

ಅನುಸೂಯ ಡಿ. ಗೆ ಡಾಕ್ಟರೇಟ್ ಪದವಿ
Comments (0)
Add Comment