ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಶದಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ಏಪ್ರಿಲ್ 3 ರಂದು ಅಂತಿಮ ವಿಚಾರಣೆಗೆ ಪ್ರಕರಣವನ್ನು ತೆಗೆದುಕೊಳ್ಳಲಾಗುವುದು ಮತ್ತು ಅಂದೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.

ವಿಚಾರಣೆಯನ್ನು ಮುಂದೂಡುವುದಿಲ್ಲ ಎಂದು ನ್ಯಾಯಾಧೀಶರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ. ಕೇಜ್ರಿವಾಲ್ ಅವರು ಇಡಿ ಕಸ್ಟಡಿಯಲ್ಲಿ ಉಳಿಯಲಿದ್ದು, ರೋಸ್ ಅವೆನ್ಯೂ ಕೋರ್ಟ್ ಮಾರ್ಚ್ 28ರಂದು ಅವರ ಕಸ್ಟಡಿಯನ್ನು ನಿರ್ಧರಿಸಲಿದೆ.

Comments (0)
Add Comment