ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ

 

ಹೊಸಪೇಟೆ : 2023-24ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1ನೇ ತರಗತಿಯಿಂದ 8ನೇ ತರಗತಿಯವರೆಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕಲ್ಯಾಣಾಧಿಕಾರಿ ಗುಂಡಪ್ಪ ಜಾಗಲಿಕೊಪ್ಪ ಅವರು ತಿಳಿಸಿದ್ದಾರೆ.

ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್  https://ssp.karnataka.go.in/   ಮೂಲಕ ಅರ್ಜಿ ಸಲ್ಲಿಸಿ ಅರ್ಜಿಗಳನ್ನು ಸಂಬAಧಪಟ್ಟ ಶಾಲೆಯ ಪ್ರಾಂಶುಪಾಲರು ಅಥವಾ ಮುಖ್ಯೋಪಾಧ್ಯಾಯರಿಗೆ ಸಲ್ಲಿಸಬೇಕು, ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿ ಎನ್‌ಪಿಸಿಐ ಮ್ಯಾಪ್ ಆಗಿರಬೇಕು, 2ನೇ ತರಗತಿಯಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಎಸ್‌ಎಸ್‌ಪಿ ಪೋರ್ಟಲ್‌ನಲ್ಲಿ ರಿನಿವಲ್ ಮಾಡಲಾಗಿದ್ದು, ಆಧಾರ್ ಸಂಖ್ಯೆಯೊAದಿಗೆ ಪರಿಶೀಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆ ವಿಭಾಗದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ಹಾಗೂ ಹರಪನಹಳ್ಳಿ ಉಪವಿಭಾಗದ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದಾಗಿದೆ.

ಜಿಲ್ಲಾ ಹಾಗೂ ತಾಲ್ಲೂಕು ಮಾಹಿತಿ ಕೇಂದ್ರಗಳಾದ ಹೊಸಪೇಟೆ ದೂ.8050435366, ಹಗರಿಬೊಮ್ಮನಹಳ್ಳಿ-9980237242, ಹೂವಿನಹಡಗಲಿ-7353696984, ಹರಪನಹಳ್ಳಿ-8494927891 ಅಥವಾ ಸಹಾಯವಾಣಿ ದೂ.8277799990 ಹೆಚ್ಚಿನ ಮಾಹಿತಿಗಾಗಿ ಹಾಗೂ ತಾಂತ್ರಿಕ ತೊಂದರೆಗಳ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ: ಅರ್ಜಿ ಆಹ್ವಾನ
Comments (0)
Add Comment