ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

 

ಹೊಸಪೇಟೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿಗಾಗಿ ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿದ್ದು, ಆಸಕ್ತರು ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ 8073250473 ಹೊಸಪೇಟೆ ವಿಭಾಗ, 7676621339 ಹರಪನಹಳ್ಳಿ ವಿಭಾಗ. ಹೆಲ್ಪ್ ಡೆಸ್ಕ್ 8277799990 ಗೆ ಸಂಪರ್ಕಿಸಬಹುದಾಗಿದೆ ಎಂದು ವಿಜಯನಗರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ: ಅರ್ಜಿ ಆಹ್ವಾನ
Comments (0)
Add Comment