ಆದಾಯ ಪ್ರಮಾಣ ಪತ್ರ ಅಪ್ಲೋಡ್‌ ಫೆ.29 ಕೊನೆಯ ದಿನ

ರೈತ ವಿದ್ಯಾನಿಧಿ ಕಾರ್ಯಕ್ರಮದಡಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಆದಾಯ ಪ್ರಮಾಣ ಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅಪ್ಲೋಡ್‌ ಮಾಡಲು ಫೆಬ್ರವರಿ 29 ಕೊನೆಯ ದಿನವಾಗಿದೆ. 2023-24 ನೇ ಸಾಲಿನಲ್ಲಿ ಇತರೆ ಇಲಾಖೆಗಳ ಯೋಜನೆಯಡಿ ವಿದ್ಯಾರ್ಥಿ  ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ರೈತ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಅನರ್ಹರಾಗಿರುತ್ತಾರೆ.

ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ಆದಾಯ ಪ್ರಮಾಣ ಪತ್ರವನ್ನು ಕೂಡಲೇ ಅಪ್ಲೋಡ್‌ ಮಾಡುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments (0)
Add Comment