ಆದಿತ್ಯ-ಎಲ್1ನಲ್ಲಿ ಕಾರ್ಯಾಚರಣೆ ಆರಂಭಿಸಿದ ಸೋಲಾರ್ ವಿಂಡ್ ಪೇಲೋಡ್- ಇಸ್ರೋ

ಬೆಂಗಳೂರು: ಭಾರತದ ಆದಿತ್ಯ-ಎಲ್-1 ಉಪಗ್ರಹದಲ್ಲಿ ಸೋಲಾರ್ ವಿಂಡ್ ಪಾರ್ಟಿಕಲ್ ಎಕ್ಸ್‌ಪೆರಿಮೆಂಟ್ ಪೇಲೋಡ್ ತನ್ನ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಇಸ್ರೋದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV-C57) ಸೆಪ್ಟೆಂಬರ್ 2ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಎರಡನೇ ಉಡಾವಣಾ ಕೇಂದ್ರದಿಂದ ಆದಿತ್ಯ-L1 ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿತ್ತು.

ಆದಿತ್ಯ-L1 ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಮೀ ದೂರದಲ್ಲಿರುವ ಮೊದಲ ಸೂರ್ಯ-ಭೂಮಿಯ ಲಗ್ರಾಂಜಿಯನ್ ಪಾಯಿಂಟ್ (L1) ಸುತ್ತ ಕರೋನಲ್ ಕಕ್ಷೆಯಿಂದ ಸೂರ್ಯನನ್ನು ಅಧ್ಯಯನ ಮಾಡುವ ಮೊದಲ ಭಾರತೀಯ ಬಾಹ್ಯಾಕಾಶ-ಆಧಾರಿತ ವೀಕ್ಷಣಾಲಯವಾಗಿದೆ.

ಆದಿತ್ಯ ಸೌರ ಮಾರುತ ಕಣ ಪ್ರಯೋಗ (ASPEX) ಎರಡು ಅತ್ಯಾಧುನಿಕ ಉಪಕರಣಗಳನ್ನು ‘ಸೋಲಾರ್ ವಿಂಡ್ ಐಯಾನ್ ಸ್ಪೆಕ್ಟ್ರೋಮೀಟರ್ (SWIS) ಮತ್ತು ಸುಪ್ರಥರ್ಮಲ್ ಮತ್ತು ಎನರ್ಜಿಟಿಕ್ ಪಾರ್ಟಿಕಲ್ ಸ್ಪೆಕ್ಟ್ರೋಮೀಟರ್ (STEPS) ಒಳಗೊಂಡಿದೆ ಎಂದು ಇಸ್ರೋ ಹೇಳಿಕೆಯಲ್ಲಿ ತಿಳಿಸಿತ್ತು.

Comments (0)
Add Comment