ಆರೋಗ್ಯ ಇಲಾಖೆಯ ಸಮಾರಂಭಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್‌ ಬಳಕೆ ಬ್ಯಾನ್‌

ಬೆಂಗಳೂರು: ಎಲ್ಲ ಆರೋಗ್ಯ ಸಂಸ್ಥೆಗಳು ಹಾಗೂ ಸಭೆ ಸಮಾರಂಭಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್‌ ಬಾಟಲ್‌ಬಳಕೆಯನ್ನು ನಿಷೇಧಿಸಲು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದ ಸರಕಾರಿ ಸ್ವಾಮ್ಯದ ಮಂಡಳಿ, ನಿಗಮ ವಿಶ್ವವಿದ್ಯಾನಿಲಯಗಳು, ಸರಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ- ಸಮಾರಂಭಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಬಾಟಲಿನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲು ಆದೇಶಿಸಲಾಗಿದೆ.

ಸಾಮೂಹಿಕ ಕುಡಿಯುವ ನೀರಿನ ವಿತರಣೆ ವ್ಯವಸ್ಥೆ ಮಾಡಲು ಸೆ.19ರಂದೇ ಸೂಚಿಸಲಾಗಿತ್ತು. ಆದರೆ ಈವರೆಗೂ ಆದೇಶವನ್ನು ಪಾಲಿಸದಿರುವುದು ಸರಕಾರದ ಗಮನಕ್ಕೆ ಬಂದಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Comments (0)
Add Comment