ಇಂದು ಅಧಿಕೃತವಾಗಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ

ಬೆಂಗಳೂರು: ಇಂದು ಅಧಿಕೃತವಾಗಿ ಸುಮಲತಾ ಅಂಬರೀಷ್ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುಮಲತಾ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸುಮಲತಾ ಅವರು ಬುಧವಾರ ಮಂಡ್ಯದಲ್ಲಿ ಬೆಂಬಲಿಗರ ಸಭೆ ನಡೆಸಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಬಗ್ಗೆ ತಮ್ಮ ತೀರ್ಮಾನವನ್ನು ಪ್ರಕಟಿಸಿದ್ದರು.

ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲಮಂತ್ರವಾಗಿದೆ. ನಮ್ಮೆಲ್ಲರ ನೆಚ್ಚಿನ ನರೇಂದ್ರ ಮೋದಿ ಅವರೇ ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ಆಶಯದಿಂದಲೇ ಬಿಜೆಪಿಯನ್ನು ಬೆಂಬಲಿಸುವುದಾಗಿ ಘೋಷಿಸಿದ್ದೇನೆ. ಇನ್ನು ಬಿಜೆಪಿ ನಾಯಕರ ಸಮ್ಮುಖದಲ್ಲಿ ಶುಕ್ರವಾರ ಬೆಳಗ್ಗೆ 11:30 ಕ್ಕೆ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದೇನೆ ಎಂದು ಬೆಂಬಲಿಗರ ಸಭೆಯಲ್ಲು ಸುಮಲತಾ ಅವರು ತಿಳಿಸಿದ್ದರು.

 

 

 

 

Comments (0)
Add Comment