ಇಂದು ರಾಜ್ಯ ಬಿಜೆಪಿ ಮುಖಂಡರನ್ನು  ಹೈಕಮಾಂಡ್ ದೆಹಲಿಗೆ ಬುಲಾವ್ .!

 

ಬೆಂಗಳೂರು: ರಾಜ್ಯ ಬಿಜೆಪಿ (BJP) ಇದೀಗ ಮೂವರು ನಾಯಕರನ್ನು ದೆಹಲಿಗೆ ಬರುವಂತೆ ಹೈಕಮಾಂಡ್ ಸೂಚನೆ ನೀಡಿದೆ. ಮಾಜಿ ಸಚಿವ ಕೆಎಸ್ ಈಶ್ವರಪ್ಪ  ಎಂಎಲ್‌ಸಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ಪಿಸಿ ಮೋಹನ್‌ಗೆ ಬಿಜೆಪಿ ಹೈಕಮಾಂಡ್‌ನಿಂದ ಬುಲಾವ್ ಬಂದಿದೆ.

ಗುರುವಾರ ಮಧ್ಯಾಹ್ನ 3.30ಕ್ಕೆ ಬಿಜೆಪಿ ಕಚೇರಿಯಲ್ಲಿ ಭೇಟಿಯಾಗಲು ಮೂವರೂ ನಾಯಕರಿಗೆ ಸೂಚನೆ ನೀಡಲಾಗಿದೆ. ಕಳೆದ ವಾರ ಮಾಜಿ ಸಿಎಂ ಡಿವಿ ಸದಾನಂದ ಗೌಡರನ್ನು ದೆಹಲಿಗೆ ಕರೆಸಿಕೊಂಡಿದ್ದ ಬಿಜೆಪಿ ಹೈಕಮಾಂಡ್, ಕೊನೆಯ ಕ್ಷಣದಲ್ಲಿ ಭೇಟಿ ಮಾಡದೆ ವಾಪಸ್ ಕಳುಹಿಸಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗುವುದಕ್ಕಾಗಿ ಸದಾನಂದ ಗೌಡರು ದೆಹಲಿಗೆ ತೆರಳಿದ್ದರು.

ಈ ಮಧ್ಯೆ, ಹೈಕಮಾಂಡ್​​ನಿಂದ ಕರೆ ಬಂದಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ನಾಳೆ ದೆಹಲಿಗೆ ಹೋಗುತ್ತಿದ್ದೇನೆ. ನನ್ನ ಜೊತೆಗೆ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಪಿ.ಸಿ. ಮೋಹನ್ ಅವರಿಗೂ ಬರಲು ಹೇಳಿದ್ದಾರೆ. ಯಾಕೆ ಕರೆದಿದ್ದಾರೆ ಗೊತ್ತಿಲ್ಲ. ಅಲ್ಲಿಗೆ ಹೋದ ಮೇಲೆ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

ಇಂದು ರಾಜ್ಯ ಬಿಜೆಪಿ ಮುಖಂಡರನ್ನು  ಹೈಕಮಾಂಡ್ ದೆಹಲಿಗೆ ಬುಲಾವ್ .!
Comments (0)
Add Comment