ಇತ್ಯರ್ಥವಾದರೂ ನನಗೆ ಐಟಿ ನೋಟಿಸ್ ನೀಡಿದೆ : ಡಿ.ಕೆ.ಶಿ ಆಕ್ರೋಶ

ಬೆಂಗಳೂರು : ನನ್ನ ವಿರುದ್ಧದ ವಿಷಯ ಇತ್ಯರ್ಥವಾದದ್ದಾಗಿದ್ದರೂ ಆದಾಯ ತೆರಿಗೆ ಇಲಾಖೆ (IT) ನನಗೆ ಶುಕ್ರವಾರ ಮತ್ತೆ ನೋಟಿಸ್ ನೀಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ ಆಗಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲುತ್ತೇವೆ ಎಂದು ಬಿಜೆಪಿಯವರಿಗೆ ಗೊತ್ತು. ಹೀಗಾಗಿ ಭಯ ಹುಟ್ಟಿಸಲು ಯತ್ನಿಸುತ್ತಿದ್ದಾರೆ. ಈಗಾಗಲೇ ಇತ್ಯರ್ಥವಾದ ವಿಚಾರಕ್ಕೆ ನೋಟಿಸ್ ಬಂದಿದೆ ಎಂದರು. ಕೇಂದ್ರ ಸರಕಾರ ಪ್ರತಿಪಕ್ಷಗಳಿಗೆ ಕಿರುಕುಳ ನೀಡುತ್ತಿದೆ, ಬಿಜೆಪಿಯು ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟಕ್ಕೆ ಹೆದರಿ ಈ ರೀತಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಇನ್ನು ಬಾಕಿ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್​​ ಪಕ್ಷಕ್ಕೆ ನೋಟಿಸ್ ನೀಡಿರುವ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡಿದೆ.

ನಾನು ಸೇರಿದಂತೆ ವಿಪಕ್ಷಗಳ ಅನೇಕ ನಾಯಕರಿಗೆ ಸಿಬಿಐ, ಐಟಿ, ಇಡಿ ದಾಳಿ ಮೂಲಕ ಕಿರುಕುಳ ನೀಡುತ್ತಿದೆ. ಆದರೆ ದಾಳಿ ಸಂಬಂಧ ಇದುವರೆಗೂ ಸೂಕ್ತ ದಾಖಲೆ ಸಲ್ಲಿಸಿಲ್ಲ. ಕೇಂದ್ರದ ತನಿಖಾ ಸಂಸ್ಥೆಗಳ ದಾಳಿಯನ್ನು ನಾವು ಎದುರಿಸುತ್ತೇವೆ ಎಂದು ಹೇಳಿದರು. ಬಿಜೆಪಿಯವರು ಈ ದೇಶದ ಪ್ರಜಾಪ್ರಭುತ್ವ, ಕಾನೂನನ್ನು ಹರಾಜು ಮಾಡುತ್ತಿದ್ದಾರೆ. ಅಧಿಕಾರ ಬರುತ್ತೆ ಹೋಗುತ್ತೆ, ಯಾವುದು ಕೂಡ ಶಾಶ್ವಾತವಲ್ಲ. ಯಾಕೆ ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಇಂಡಿಯಾ ಮೈತ್ರಿಯನ್ನು ಟಾರ್ಗೆಟ್ ಮಾಡಲಾಗಿದೆ. ಸೋಲಿನ ಭಯದಿಂದ ಎನ್​ಡಿಎ ಮೈತ್ರಿಕೂಟ ಹತಾಶೆಯಾಗಿದೆ ಎಂದು ವಾಗ್ದಾಳಿ ಮಾಡಿದರು.

Comments (0)
Add Comment