ಈರುಳ್ಳಿ ಬೆಳೆಯುವ ರೈತರಿಗೊಂದು ಮಾಹಿತಿ..!

 

ಚಿತ್ರದುರ್ಗ : ಹಿರಿಯೂರು ತಾಲ್ಲೂಕು ಬಬ್ಬೂರುಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಮಾರ್ಚ್ 06ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲೆಯ ರೈತರಿಗೆ ಈರುಳ್ಳಿ ಬೆಳೆಯಲ್ಲಿ ಅನುಸರಿಸ ಬೇಕಾದ ಸುಧಾರಿತ ತಂತ್ರಜ್ಞಾನದ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ  ಬಬ್ಬೂರು ತೋಟಗಾರಿಕೆ ಮಹಾವಿದ್ಯಾಲಯದ ಡಾ. ಪ್ರಕಾಶ್ ಕೆರೂರು ಮತ್ತು ಡಾ. ಶ್ರುತಿ ಹಾಗೂ ಬಬ್ಬೂರು ಫಾರಂ ಕೆವಿಕೆ ಕೀಟಶಾಸ್ತ್ರಜ್ಞ ಡಾ. ರುದ್ರಮುನಿ ಅವರು ಈರುಳ್ಳಿ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳು ಮತ್ತು ಕೀಟ ರೋಗ ನಿರ್ವಹಣೆಯ ಕುರಿತು ವಿಷಯ ಮಂಡನೆ ಮಾಡುವರು.

ಆಸಕ್ತ 50 ಜನ ರೈತಭಾಂದವರು ತರಬೇತಿಯಲ್ಲಿ ಭಾಗವಹಿಸಲು ಆರ್.ರಜನೀಕಾಂತ, ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬಬ್ಬೂರು ಫಾರಂ (8277931058), ಎಂ.ಉಷಾರಾಣಿ, ಸಹಾಯಕ ಕೃಷಿ ನಿರ್ದೇಶಕರು (ರೈ.ಮ) 9980730696, ಟಿ.ಪಿ.ರಂಜಿತಾ, ಕೃಷಿ ಅಧಿಕಾರಿ (8277930959), ಸಿಕಂದರ್ ಬಾಷಾ,     ಕೃಷಿ ಅಧಿಕಾರಿ (8277931058) ಮತ್ತು ಪವಿತ್ರಾ ಎಂ. ಜೆ. (9535412286) ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಈರುಳ್ಳಿ ಬೆಳೆಯುವ ರೈತರಿಗೊಂದು ಮಾಹಿತಿ..!
Comments (0)
Add Comment