ಉಗ್ರರ ವಿರುದ್ದ ಹೋರಾಡಿ ಹುತಾತ್ಮರಾದ ಕರಾವಳಿಯ ವೀರ ಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್

ಮಂಗಳೂರು : ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರಾವಳಿ ಮೂಲದ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಹುತಾತ್ಮರಾಗಿದ್ದಾರೆ.

63–ರಾಷ್ಟ್ರೀಯ ರೈಫಲ್ಸ್‌ನ ಕ್ಯಾಪ್ಟನ್‌ ಎಂ.ವಿ.ಪ್ರಾಂಜಲ್‌ ಅವರು ಮಂಗಳೂರು ರಿಫೈನರಿ ಅಂಡ್ ಪೆಟ್ರೊಕೆಮಿಕಲ್ಸ್ ಲಿಮಿಟೆಡ್‌ನ (ಎಂಆರ್‌ಪಿಎಲ್‌) ಮಾಜಿ ನಿರ್ದೇಶಕ ಎಂ.ವೆಂಕಟೇಶ್ ಅವರ ಪುತ್ರ. ಪ್ರಾಂಜಲ್‌, ಎಂಆರ್‌ಪಿಎಲ್‌ನ ದೆಹಲಿ ಪಬ್ಲಿಕ್‌ ಸ್ಕೂಲ್‌ ಹಳೆ ವಿದ್ಯಾರ್ಥಿ. ಮಂಗಳೂರಿನಲ್ಲಿ ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರ. ಮಂಗಳೂರಿನಲ್ಲೇ ಹುಟ್ಟಿ ಬೆಳೆದ ಪ್ರಾಂಜಲ್. ಎಂಆರ್​​ಪಿಎಲ್ ಡೆಲ್ಲಿ ಸ್ಕೂಲ್ ನಲ್ಲಿ ಹತ್ತನೇ ತರಗತಿವರೆಗೆ ವಿಧ್ಯಾಭ್ಯಾಸ ಮಾಡಿದ್ದರು. ನಂತರ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ರು. ಬಳಿಕ ಮಧ್ಯಪ್ರದೇಶದ ಮಿಲಿಟರಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆದುಕೊಂಡಿದ್ದರು. ಎರಡು ವರ್ಷಗಳ ಹಿಂದೆಯಷ್ಟೇ ಪ್ರಾಂಜಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಪ್ರಾಂಜಲ್ ಓದಿದ್ದ ಎಂಆರ್​ಪಿಎಲ್ ಡೆಲ್ಲಿ ಶಾಲೆಗೆ ಇಂದು ರಜೆ ಘೋಷಿಸಲಾಗಿದೆ.

Comments (0)
Add Comment