ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾದ್ಯಮ ಉದ್ಯಮ ಸ್ಥಾಪನೆಗೆ ಅರ್ಜಿ

 

ಚಿತ್ರದುರ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪಂಗಡಗಳ ಅಭಿವೃದ್ಧಿ ನಿಗಮವು 2023-24ನೇ ಸಾಲಿನ ಪರಿಶಿಷ್ಟ ಪಂಗಡದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಕ್ರಿಯಾ ಯೋಜನೆಯಡಿ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮ ಉದ್ಯಮ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ  ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ (ಯೂಟ್ಯುಬ್ ಚಾನೆಲ್, ಸೋಷಿಯಲ್ ಮೀಡಿಯಾ ನ್ಯೂಸ್ ಪೇಜಸ್, ನ್ಯೂಸ್ ಆನ್ಲೈನ್ ಬ್ಲಾಗ್, ನ್ಯೂಸ್ ಕಂಟೆಂಟ್, ವೆಬ್ ಪೇಜಸ್, ಆನ್ಲೈನ್ ಜರ್ನಲಿಸಂ, ಮಾಧ್ಯಮ ಸಂಬಂಧಿತದ ತರಬೇತಿ) ಉದ್ಯಮ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಉದ್ದಿಮೆಯನ್ನು ಸ್ಥಾಪಿಸಲು ಘಟಕದ ವೆಚ್ಚ ಶೇ.70 ರಷ್ಟು ಅಥವಾ ರೂ. 5 ಲಕ್ಷ ಸಹಾಯಧನವನ್ನು ಪಡೆಯಲು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಉಳಿದ ಘಟಕದ ವೆಚ್ಚ ಬ್ಯಾಂಕ್‍ನಿಂದ ಪಡೆಯಬೇಕು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾದ್ಯಮ ಉದ್ಯಮ ಸ್ಥಾಪನೆಗೆ ಅರ್ಜಿ
Comments (0)
Add Comment