ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ.!

 

ಬೆಂಗಳೂರು: ಕರ್ನಾಟಕರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ನವೆಂಬರ್ 24 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.30 ಗಂಟೆಯ ವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವÀ ಪ್ರೊ. ಕೆ.ಎಲ್.ಎನ್ ಮೂರ್ತಿಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ.!
Comments (0)
Add Comment