“ಕಟೀಲು ದೇವಿ ಮೇಲೆ ಆಣೆ ಮಾಡಿ ಹೇಳ್ತೇನೆ ರಾಜಕೀಯ ಜೀವನದಲ್ಲಿ ಯಾರ ಬಳಿಯೂ ಒಂದು ರೂ. ಮುಟ್ಟಿಲ್ಲ”..!

ಬಂಟ್ವಾಳ : ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾವುಕರಾದ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ.

ಲೋಕಸಭಾ ಚುನಾವಣಾ ಹೊಸ್ತಿಲಲ್ಲೇ ಈ ವಿದ್ಯಮಾನ ನಡೆದಿದೆ. ರಾಜ್ಯಾಧ್ಯಕ್ಷರಾಗಿ ಅಭೂತಪೂರ್ವ ಸೇವೆ ಸಲ್ಲಿಸಿದ್ದ ಸಂಸದರೂ ಆಗಿರುವ ನಳಿನ್ ಕುಮಾರ್ ಕಟೀಲ್‌ಗೆ ಬುಧವಾರ ಬಂಟ್ವಾಳದಲ್ಲಿ ಆಭಿನಂದನಾ ಸಮಾರಂಭವೊಂದನ್ನು ಆಯೋಜಿಸಲಾಗಿತ್ತು. ಹಲವಾರು ಬಾರಿ ಸಾಮಾಜಿಕ ಜಾಲತಾಣ, ವೇದಿಕೆಗಳಲ್ಲಿ, ಕಾರ್ಯಕರ್ತರ ಸಭೆಗಳಲ್ಲಿ ಆದ ಅಸಮಾಧಾನದ ಬಗ್ಗೆ ಮೊದಲ ಬಾರಿಗೆ ಕಟೀಲ್ ಪ್ರತಿಕ್ರೀಯಿಸಿದ್ದು,ನನ್ನ ವಿರುದ್ದದ ಹಲವು ಟೀಕೆ ,ಟಿಪ್ಪಣಿಯನ್ನ ಕೇಳಿದ್ದೇನೆ, ಹತ್ತಾರು ಬಾರಿ ನನಗಾದಂತಹ ಅಪಮಾನಗಳನ್ನ ಸಹಿಸಿಕೊಂಡಿದ್ದೇನೆ,ನಾನು ಬಿಜೆಪಿಯ ವಿಚಾರಧಾರೆ ಒಪ್ಪಿದ ಕಾರಣ ಎಷ್ಟೇ ಅಪಮಾನವಾದರೂ ಸಹಿಸಿಕೊಂಡಿದ್ದೇನೆ. ಮತ್ತು ನಿಮ್ಮ ಆಶಯಕ್ಕೆ ನಾನು ಕೈ ಮುಗಿಯುತ್ತೇನೆ. ಕಳೆದ ಸಮಯದಲ್ಲಿ ಹಲವು ನೋವನ್ನ ಅನುಭವಿಸಿದ್ದೇನೆ. ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ ಸಿಗಬೇಕೆಂದಿಲ್ಲ ಮತ್ತು ಅದರ ಆಸೆಯನ್ನು ನಾನು ಇಟ್ಕೊಂಡವನಲ್ಲ ಆದ್ರೆ ಲೋಕಸಭಾ ಅಭ್ಯರ್ಥಿ ಯಾರೇ ಆದರೂ ನನ್ನ ಬೆಂಬಲವಿದೆ. ಸಂಸದನಾದ ಬಳಿಕ ಹಳ್ಳಿ ಹಳ್ಳಿಗಳಿಗೆ ಬರಲು ಆಗಲಿಲ್ಲಎಂಬ ಕಾರಣಕ್ಕೆ ನನಗೂ ದುಃಖವಿದೆ. ಕಟೀಲು ದೇವರ ಮುಂದೆ ಪ್ರಮಾಣ ಮಾಡಿ ಹೇಳುತ್ತೇನೆ ನಾನು ಯಾರಿಂದಲೂ ಹಣ ಪಡೆದುಕೊಂಡಿಲ್ಲ, ಅಧಿಕಾರಿ, ಕಾಂಟ್ರಾಕ್ಟ್ ದಾರರಿಂದ ಕೂಡ ನಾನು ಹಣ ಪಡೆದಿಲ್ಲ. ರಾಜ್ಯಾಧ್ಯಕ್ಷನ ನೆಲೆಯಲ್ಲಿ ಇಡೀ ರಾಜ್ಯದ ಜವಾಬ್ದಾರಿಯಿತ್ತು. ಪ್ರಾಮಾಣಿಕವಾಗಿ ಬಿಜೆಪಿಯನ್ನ ಹಳ್ಳಿ ಹಳ್ಳಿಗಳಿಗೆ ತಲುಪಿಸುವ ಕೆಲಸ ಮಾಡಿದ್ದೇನೆ ಹೊರತುನೀವು ತಲೆ ತಗ್ಗಿಸುವ ರೀತಿಯ ಯಾವುದೇ ಕೆಲಸ ಮಾಡಲಿಲ್ಲ. ಈಗ ಮತ್ತೆ ನಾನು ದಕ್ಷಿಣ ಕನ್ನಡ ಜಿಲ್ಲೆಯತ್ತ ಗಮನ ನೀಡುತ್ತೇನೆ ಮತ್ತು ನಿಮ್ಮ ಗೌರವಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡುತ್ತೇನೆ ಇನ್ನೂ ಉಳಿದಿರುವ 6 ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ನಿಮ್ಮ ಗ್ರಾಮಕ್ಕೆ ಬರುತ್ತೇನೆಮತ್ತೆ ನಿಮ್ಮ ಆಶೀರ್ವಾದವನ್ನ ಕಾಲು ಮುಟ್ಟಿ ನಮಸ್ಕಾರ ಮಾಡುವ ಮೂಲಕ ಕೇಳುತ್ತೇನೆ ಎಂದು ಹೇಳುವಾಗ ಭಾವುಕರಾಗಿ ದುಃಖ ಉಮ್ಮಳಿಸಿ ಬಂದು ಗದ್ಗದೀತರಾದ್ರು.

Comments (0)
Add Comment