ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರ ಒಪ್ಪಿಗೆ – 60% ಕನ್ನಡ ಕಾನೂನು ಜಾರಿಗೆ

ಬೆಂಗಳೂರು : ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರ ಒಪ್ಪಿಗೆ ಸಿಕ್ಕಿದೆ. ರಾಜ್ಯ ಪತ್ರ ಪ್ರಕಟವಾಗಿದ್ದು, ಈ ಮೂಲಕ ನಾಮಫಲಕದಲ್ಲಿ ಶೇಕಡಾ 60ರಷ್ಟು ಕನ್ನಡಕ್ಕೆ ಪ್ರಾಶಸ್ತ್ಯ ಒಳಗೊಂಡ ಕಾನೂನು ಜಾರಿಗೆ ಬಂದಿದೆ. ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆ, ವಾಣಿಜ್ಯ, ವ್ಯವಹಾರ, ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಪ್ರಯೋಗಾಲಯ, ಆಸ್ಪತ್ರೆ, ಮನರಂಜನಾ ಕೇಂದ್ರ, ಹೋಟೆಲ್ ಮೊದಲಾದವುಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇಕಡಾ 60ರಷ್ಟು ಹಾಕಬೇಕು. ಕನ್ನಡ ಭಾಷೆ ನಾಮ ಫಲಕದ ಮೇಲ್ಭಾಗದಲ್ಲಿ ಪ್ರದರ್ಶಿಸಬೇಕು ಎಂದು ಹೇಳಲಾಗಿದೆ.

Comments (0)
Add Comment