ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆ

ಬೆಂಗಳೂರು: 30 ವರ್ಷಗಳ ಹಿಂದಿನ ಪ್ರಕರಣವನ್ನು ಮುನ್ನೆಲೆಗೆ ತರುವ ಕೆಲಸ ಸಿದ್ದರಾಮಯ್ಯ ಮಾಡಿದ್ದಾರೆ. ಹೀಗಾಗಿ ರಾಮಭಕ್ತರನ್ನು ಹಳೇ ಪ್ರ ಕರಣಗಳಲ್ಲಿ ಬಂಧಿಸುವುದನ್ನು ವಿರೋಧಿಸಿ ಬುಧವಾರ ರಾಜ್ಯ ವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯ ಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಹಿಂದೂ ಕಾರ್ಯಕರ್ತನನ್ನು ಬಂಧಿಸಿರುವ ಸಂದರ್ಭದ ಬಗ್ಗೆ ಎಲ್ಲರೂ ಯೋಚಿಸಬೇಕಿದೆ. ಕೇವಲ ರಾಜ್ಯದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠೆ ನಡೆಯಲಿರುವ ಬಗ್ಗೆ ಸಂಭ್ರಮದ ವಾತಾವರಣವಿದೆ. ಜನ 22 ನೇ ತಾರೀಖನ್ನು ಕಾತುರದಿಂದ ಎದುರು ನೋಡುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜನರ ಸಂತೋಷ ಮತ್ತು ನಾಡಿನ ನೆಮ್ಮದಿ ಕೆಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಕರ ಸೇವಕರನ್ನು ಹುಡುಕಿ ಬಂಧಿಸುವಮೂಲಕ ರಾಜ್ಯ
ಮಾತ್ರ ವಲ್ಲ ಇಡೀ ದೇಶಕ್ಕೆ ರಾಮಭಕ್ತರ ವಿರುದ್ಧ ಸಂದೇಶ ಕೊಡಲು ಸಿದ್ದ ರಾಮಯ್ಯ ಸರ್ಕಾರಮುಂದಾಗಿದೆ’ ಎಂದು ಹೇಳಿದರು.

ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ರಾಜ್ಯ ಬಿಜೆಪಿ ಘಟನ ಪ್ರತಿಭಟನೆ ನಡೆಸಲಿದ್ದು, ಆ ಸಂದರ್ಭ ಯಾವದಾದರೂ ಅಹಿತಕರ ಘಟನೆ ಜರುಗಿದರೆ ಅದಕ್ಕೆ ಸರ್ಕಾರವೇ ಹೊಣೆಯಾಗಲಿದೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹೋರಾಟ ನಡೆಸುತ್ತೇವೆ. ಅದೇ ರೀತಿ ರಾಜ್ಯದ ಎಲ್ಲ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿಯೂ ಪ್ರತಿಭಟನೆ ನಡೆಸುತ್ತೇವೆ ಎಂದರು

Comments (0)
Add Comment