ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಿ – ರಕ್ಷಣ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಕರ್ನಾಟಕದ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸೇರಿಸಲು ವಿನಂತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಇಂದು ಪತ್ರ ಬರೆದಿದ್ದಾರೆ.

ಎಕ್ಸ್ ನಲ್ಲಿ ಪತ್ರವನ್ನು ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ”ನಾನು ರಕ್ಷಣ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಲು ವಿನಂತಿಸಿ ಪತ್ರ ಬರೆದಿದ್ದೇನೆ. 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ನಿರಾಕರಿಸುವುದು ಕೇವಲ ಪ್ರಮಾದವಲ್ಲ. ಇದು ನಮ್ಮ ರಾಜ್ಯದ ಘನತೆಗೆ ಧಕ್ಕೆಯಾಗಿದೆ. ನಮ್ಮ ಸಾಧನೆಗಳು ರಾಷ್ಟ್ರೀಯ ವೇದಿಕೆಗೆ ಅರ್ಹವಾಗಿವೆ” ಎಂದು ಬರೆದಿದ್ದಾರೆ.

ಇನ್ನು ಕರ್ನಾಟಕ ಈ ಹಿಂದೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. ಈ ಬಾರಿ (2024) ”ಬ್ರ್ಯಾಂಡ್ ಬೆಂಗಳೂರು” ಥೀಮ್ ನಮ್ಮದಾಗಿತ್ತು. ರಕ್ಷಣ ಸಚಿವಾಲಯ ಕರೆದ ಎಲ್ಲ ಸಭೆಗಳಲ್ಲಿ ಕರ್ನಾಟಕದ ಪ್ರತಿನಿಧಿಗಳು ಭಾಗಿಯಾಗಿದ್ದರು. ಕೊನೆಯ ಸುತ್ತಿನ ಸಭೆಯ ಬಳಿಕ ಕರ್ನಾಟಕದ ಸ್ತಬ್ದ ಚಿತ್ರ ಪರಿಗಣಿಸಿಲ್ಲ. ಸ್ತಬ್ದ ಚಿತ್ರದ ಧ್ಯೇಯ ಅಪ್ರತಿಮ ನಗರ ಬೆಂಗಳೂರು ಹೇಗೆ ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸಿದೆ ಮತ್ತು ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ದೃಢವಾಗಿ ಬೇರೂರಿದೆ ಎಂಬುದನ್ನು ಚಿತ್ರಿಸುತ್ತಿದೆ ಎಂದು ಹೇಳಿದ್ದಾರೆ.

Comments (0)
Add Comment