ಕರ್ನಾಟಕ ಸಂಭ್ರಮ-50: ವರ್ಷಪೂರ್ತಿ ರಾಜ್ಯೋತ್ಸವ ಆಚರಣೆಗೆ ಚಾಲನೆ.!

 

ಬೆಂಗಳೂರು : ಕರ್ನಾಟಕ ಸಂಭ್ರಮ-50 ಹೆಸರಿನಲ್ಲಿ ವರ್ಷಪೂರ್ತಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸರ್ಕಾರ ಮುಂದಾಗಿದೆ. ಇದರ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಜೆ 5 ಗಂಟೆಗೆ ವಿಶ್ವವಿಖ್ಯಾತ ಹಂಪಿಯಲ್ಲಿ ಕರುನಾಡಿನ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿಶೇಷ ವಿಮಾನದ ಮೂಲಕ ಬೆಳಗ್ಗೆ 10.50ಕ್ಕೆ ಕೊಪ್ಪಳದ ಗಿಣಿಗೇರಾ ಏರ್‌ಸ್ಟ್ರಿಪ್​ಗೆ ತೆರಳಲಿದ್ದಾರೆ.

10.55ಕ್ಕೆ ರಸ್ತೆ ಮಾರ್ಗವಾಗಿ ಹೊಸಪೇಟೆಗೆ ತೆರಳುತ್ತಾರೆ. 11.15ಕ್ಕೆ ಹೊಸಪೇಟೆ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5 ಗಂಟೆಗೆ ಹಂಪಿಗೆ ತೆರಳಿ 5.30ಕ್ಕೆ ಹಂಪಿಯ ಶ್ರೀ ವಿರುಪಾಕ್ಷ ದೇವಸ್ಥಾನದ ಆವರಣದಲ್ಲಿ ದೀಪ ಬೆಳಗಿಸುವ ಮೂಲಕ ಕರ್ನಾಟಕ ಸಂಭ್ರಮ-50 ಜ್ಯೋತಿ ರಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಸಂಜೆ 5.50ಕ್ಕೆ ಅದೇ ಸ್ಥಳದಲ್ಲಿ ಕನ್ನಡಾಂಬೆಗೆ ನುಡಿನಮನ, ಧರ್ಮಗಳ ಸಂದೇಶ ಹಾಗೂ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಹಂಪಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.

 

 

ಕರ್ನಾಟಕ ಸಂಭ್ರಮ-50: ವರ್ಷಪೂರ್ತಿ ರಾಜ್ಯೋತ್ಸವ ಆಚರಣೆಗೆ ಚಾಲನೆ.!
Comments (0)
Add Comment