ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ಅಂಜಾರಿಯಾ ಹೆಸರು ಸೂಚಿಸಿದ ಕೊಲಿಜಿಯಂ

ಬೆಂಗಳೂರು: ಪ್ರಸ್ತುತ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಆಗಿರುವ ಜಸ್ಟಿಸ್ ಪಿ.ಎಸ್. ದಿನೇಶ್ ಕುಮಾರ್ ಅವರು ಫೆಬ್ರವರಿ 24ರಂದು ನಿವೃತ್ತರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ನ್ಯಾಯಮೂರ್ತಿಗಳ ನೇಮಕ ಪ್ರಕ್ರಿಯೆ ನಡೆದಿದೆ. ಜಸ್ಟಿಸ್ ಪಿ.ಎಸ್. ದಿನೇಶ್ ಕುಮಾರ್ ಅವರ ನಿವೃತ್ತಿ ನಂತರ ಗುಜರಾತ್ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಸುಪ್ರೀಮ್‌ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿದೆ.

2011 ರಿಂದ ಗುಜರಾತ್ ಹೈಕೋರ್ಟ್ ನಲ್ಲಿ ನ್ಯಾಯಮೂರ್ತಿ ಅಂಜಾರಿಯಾ ಕಾರ್ಯ ನಿರ್ವಹಿಸುತ್ತಿದ್ದಾರೆ. ಅದಕ್ಕಿಂತ ಮೊದಲು ಅವರು ಗುಜರಾತ್ ಹೈಕೋರ್ಟ್‌ನಲ್ಲಿ ವಕೀಲರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಕನ್ನಡಿಗರಾಗಿರುವ ಹಾಲಿ ಹೈಕೋರ್ಟ್ ಸಿಜೆ ಪಿ.ಎಸ್. ದಿನೇಶ್ ಕುಮಾರ್ ಫೆಬ್ರವರಿ 24ರಂದು ನಿವೃತ್ತರಾಗಲಿದ್ದಾರೆ. ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನೇಮಕ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದ್ದು, ಕೇಂದ್ರ ಸರ್ಕಾರಕ್ಕೆ ಕಳುಹಿಸಿಲಾಗುವುದು. ಕಾನೂನು ಸಚಿವಾಲಯ ಪ್ರಕ್ರಿಯೆ ಪೂರ್ಣಗೊಳಿಸಲಿದೆ.

Comments (0)
Add Comment