ಕಲ್ಯಾಣ ಕರ್ನಾಟಕದಲ್ಲಿ 50 ಸಾವಿರ ಹುದ್ದೆ ಭರ್ತಿ..!

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲೇ 371J ಮೀಸಲಾತಿಯಡಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸದಾಗಿ 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ವೈದ್ಯ ಶಿಕ್ಷಣ ಸಚಿವ ಡಾ. ಶರಣು ಪ್ರಕಾಶ ಪಾಟೀಲ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿ, ಈಗಾಗಲೇ ವಿವಿಧ ಇಲಾಖೆಗಳಲ್ಲಿ 15 ಸಾವಿರ ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ನಡೆದಿದೆ.

ಮುಂದಿನ 2-3 ವರ್ಷಗಳಲ್ಲಿ ಎಲ್ಲ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸ್ಥಳೀಯರಿಗೆ ಉದ್ಯೋಗ ನೀಡಲಾಗುವುದು.

ನಮ್ಮ ಸರ್ಕಾರ ಬಂದ ಮೇಲೆ ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ ಎಂದರು.

Comments (0)
Add Comment