ಕಾಂಗ್ರೆಸ್‌ಗೆ ಸೇರುತ್ತಾರಾ ಡಿವಿ ಸದಾನಂದ ಗೌಡ..? ಡಿಸಿಎಂ ಡಿ.ಕೆ.ಶಿ ಹೇಳಿದ್ದೇನು?

ಬೆಂಗಳೂರು : ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜಕಾರಣಿಗಳ ಜಿಗಿತ ಪರ್ವಕ್ಕೆ ವೇದಿಕೆ ನಿಧಾನವಾಗಿ ರೆಡಿಯಾಗುತ್ತಿದೆ. ಇದಕ್ಕೆ ಪೂರಕವಾಗಿ ಡಿಸಿಎಂ ಡಿಕೆ ಶಿವಕುಮಾರ ಹೇಳಿಕೆವೊಂದನ್ನು ನೀಡಿದ್ದಾರೆ. ಬಿಜೆಪಿಯ ಮೂವರು ಸಂಸದರು ಕಾಂಗ್ರೆಸ್‌ ಸೇರಲು ಬಯಸಿದ್ದು,ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ಆದರೆ ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ.

ಡಿ.ವಿ ಸದಾನಂದಗೌಡರು ಬಂದರೂ ಸ್ವಾಗತ ಎಂದು ಹೇಳಿದರು. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಬಿಗ್‌ಟ್ವಿಸ್ಟ್‌ ಪಡೆಯುವ ಸುಳಿವು ನೀಡಿದರು. ಇನ್ನು ಮಾಜಿ ಸಿಎಂ ಡಿ.ವಿ.ಸದಾನಾಂದಗೌಡ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ಗಾಗಿ ಭಾರಿ ಕಸರತ್ತು ನಡೆಸಿದ್ದಾರೆ. ಆದರೆ ಬಿಜೆಪಿ ವರಿಷ್ಠರು ಸದಾನಂದಗೌಡಗೆ ಈ ಬಾರಿ ಟಿಕೆಟ್ ನೀಡುತ್ತಾರೆಯೇ ಎಂಬ ಅನುಮಾನ ವ್ಯಕ್ತವಾಗಿದೆ.

ಈ ಮಧ್ಯೆ ಕಲಬುರ್ಗಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಮಾರ್ಚ್ 15ಕ್ಕೆ ಬಿಡುಗಡೆಯಾಗಲಿದೆ. ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಭೆ ಬಳಿಕ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.

Comments (0)
Add Comment