ಕಾಂಗ್ರೆಸ್‌ ‘ಘರ್ ಘರ್ ಗ್ಯಾರಂಟಿ’ ಅಭಿಯಾನಕ್ಕೆ ಖರ್ಗೆ ಚಾಲನೆ

ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ ‘ಘರ್ ಘರ್ ಗ್ಯಾರಂಟಿ’ ಅಭಿಯಾನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ನ ಖರ್ಗೆ ಇಂದು (ಬುಧವಾರ) ಚಾಲನೆ ನೀಡಿದರು.

ನಮ್ಮ ‘ಪಂಚ ನ್ಯಾಯ ಪಚ್ಚೀ ಸ್ ಗ್ಯಾರಂಟಿ’ ಅನ್ನು ಜನರಿಗೆ ತಲುಪಿಸಲು ಈ ಗ್ಯಾರಂಟಿ ಕಾರ್ಡ್ ವಿತರಿಸುತ್ತಿದ್ದೇವೆ. ದೇ ಶದಾದ್ಯಂ ತ ಎಂಟು ಕೋಟಿ ಗ್ಯಾರಂಟಿ ಕಾರ್ಡ್‌ ಗಳನ್ನು ವಿತರಿಸುವ ಯೋಜನೆ. ನಾವು ನೀಡಿದ ಭರವಸೆಗಳನ್ನೆಲ್ಲ ಈಡೇರಿಸಲಿದ್ದೇವೆ ಎಂದು ಜನರಿಗೆ ತಿಳಿಸಲಿದ್ದೇವೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಈಶಾನ್ಯ ದೆಹಲಿ ಲೋ ಕಸಭಾ ಕ್ಷೇ ತ್ರದ ಕೈ ಥವಾಡದ ಉಸ್ಮಾನ್ಪುರದಿಂದ ಈ ಅಭಿಯಾನವನ್ನು ಪ್ರಾರಂಭಿಸಲಾಯಿತು. ಕಾಂಗ್ರೆಸ್‌ ಎಲ್ಲ ನಾಯಕರು ಹಾಗೂ ಕಾರ್ಯ ಕರ್ತ ರು ಈ ಕಾರ್ಡ್ ಅನ್ನು ಮನೆ ಮನೆಗಳಿಗೆ ತೆರಳಿ ವಿತರಣೆ ಮಾಡಲಿದ್ದಾರೆ. ಮೈತ್ರಿ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಜಾರಿ ಮಾಡಲಿರುವ ಯೋಜನೆಗಳ ಬಗ್ಗೆ ಮನವರಿಕೆ ಮಾಡಲಿದ್ದಾರೆ ಎಂದು ಹೇಳಿದರು.

ನಮ್ಮ ಸರ್ಕಾರ ಸದಾ ಜನಪರ ಕೆಲಸ ಮಾಡಲಿದೆ ಎಂದು ಭರವಸೆ ನೀಡುತ್ತೇವೆ. ಪ್ರಧಾನಿ ‘ಮೋದಿ ಕಿ ಗ್ಯಾರಂಟಿ’ ಬಗ್ಗೆ ಮಾತನಾಡುತ್ತಾರೆ. ಆದರೆ ಅವರ ಗ್ಯಾರಂಟಿಗಳು ಎಂದಿಗೂ ಜನರನ್ನು ತಲುಪುವುದಿಲ್ಲ. ಪ್ರಧಾನಿ ವರ್ಷ ಕ್ಕೆ ಎರಡು ಕೋಟಿ ಉದ್ಯೋ ಗಗಳ ಬಗ್ಗೆ ಮಾತನಾಡುತ್ತಾರೆ.ಆದರೆ ಜನರಿಗೆ ಅದು ಸಿಕ್ಕಿಲ್ಲ ಎಂದು ಅವರು ಆರೋ ಪಿಸಿದರು. ಯುವ ನ್ಯಾಯ, ನಾರಿ ನ್ಯಾಯ, ಕಿಸಾನ್ ನ್ಯಾಯ, ಶ್ರಮಿಕ ನ್ಯಾಯ ಮತ್ತು ಹಿಸ್ಸೇ ದಾರಿ ನ್ಯಾಯ , ಇದು ಕಾಂಗ್ರೆಸ್‌ನ ಐದು ಗ್ಯಾರಂಟಿಗಳು

Comments (0)
Add Comment