ಕಾಂತಾರ ಅಧ್ಯಾಯ 1 ರ ಫಸ್ಟ್ ಲುಕ್ ರಿಲೀಸ್

ಬೆಂಗಳೂರು : ಬಹು ನಿರೀಕ್ಷಿತ ಕಾಂತಾರ ಭಾಗ 2 ರ ಫಸ್ಟ್ ಲುಕ್ ಇಂದು ಬಿಡುಗಡೆಯಾಗಿದೆ. ಕಾಂತಾರ ಸಿನೆಮಾದ ಅಧ್ಯಾಯ 1 ಇದು ಎಂದು ತಿಳಿದು ಬಂದಿದ್ದು, ರಿಷಭ್ ಶೆಟ್ಟಿ ಅವರ ಉಗ್ರ ರೂಪಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಬಿಡುಗಡೆಯಾಗಿದ್ದು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ.

ಯುಟ್ಯೂಬ್‌ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಕಾಂತಾರ ಪ್ರೀಕ್ವೆಲ್‌ ಕತೆ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ ಎಂದು ಬಹಿರಂಗವಾಗಿದೆ. ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್‌ ಅನ್ನು ಹೊಂಬಾಳೆ ಬಣ್ಣಿಸಿದೆ.

ರಿಷಬ್ ಶೆಟ್ಟಿ ಅವರು ಉಗ್ರಾವತಾರ ತಾಳಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಇದೆ. ಅವರು ಬಾವಿಯಲ್ಲಿ ನಿಂತಂತೆ ಕಂಡಿದೆ. ಮೇಲ್ಭಾಗದಲ್ಲಿ ಬೆಂಕಿ ಇದೆ. ಅವರ ಮೇಲೆ ಯಾರೋ ದಾಳಿ ಮಾಡಲು ಬರುತ್ತಿದ್ದಾರೆ. ಕನ್ನಡದ ಜೊತೆ ಏಳು ಭಾಷೆಗಳಲ್ಲಿ ಟೀಸರ್ ಲಭ್ಯವಿದೆ. ಯೂಟ್ಯೂಬ್​ನಲ್ಲಿ ಇಷ್ಟದ ಆಯ್ಕೆಯ ಭಾಷೆಯಲ್ಲಿ ಟೀಸರ್ ನೋಡಬಹುದು.

ಉಡುಪಿಯ ಕುಂಭಾಸಿಯಲ್ಲಿ ಚಿತ್ರದ ಮುಹೂರ್ತ  ನಡೆದಿದ್ದು, ಈ ಸಂದರ್ಭದಲ್ಲಿ ರಿಷಬ್  ಮಾತನಾಡಿದ್ದಾರೆ. ‘ನಿರ್ಮಾಪಕ ವಿಜಯ್ ಕಿರಗೊಂದೂರು ದೊಡ್ಡ ಶಕ್ತಿ. ಇಡೀ ದೇಶದಲ್ಲಿ ಅವರು ಒಂದು ಪವರ್ ಹೌಸ್. ಕಾಂತರಾ ಈ ಮಟ್ಟಕ್ಕೆ ಹೋಗಲು ಅವರ ಬೆಂಬಲ ಬಹಳ ದೊಡ್ಡದು. ಕಾಂತಾರ ಚಿತ್ರಕ್ಕೆ ಅವರು ಸಂಪೂರ್ಣವಾಗಿ ಬೆಂಬಲ ಕೊಟ್ಟಿದ್ದಾರೆ. ಇಡೀ ಚಿತ್ರಕ್ಕೆ ಅವರು ದೊಡ್ಡ ಕಾನ್ಫಿಡೆನ್ಸ್ ಅನ್ನು ತುಂಬಿದ್ದಾರೆ. ಒಂದು ಚಿತ್ರಕ್ಕೆ ನಾವು ಇಂತಿಷ್ಟು ಬಜೆಟ್ ನಿರ್ಧಾರ ಮಾಡಿರುತ್ತೇವೆ. ಅದು ಮುಂದೆ ಎಲ್ಲೋ ಹೋಗಿ ತಲುಪುತ್ತದೆ. ಕಾಂತಾರ ಮೊದಲ ಅಧ್ಯಾಯ ಕಥೆ ಅಪೇಕ್ಷೆ ಮಾಡುತ್ತದೆ ಅದಕ್ಕೆ ನಿರ್ಮಾಪಕರು ಪೂರ್ಣ ಸಹಕಾರ ಕೊಟ್ಟಿದ್ದಾರೆ ಎಂದು ಮಾತನಾಡಿದ್ದಾರೆ.

Comments (0)
Add Comment