— -ಕಿನ್ನರಿ ಬ್ರಹ್ಮಯ್ಯ ಅವರ ವಚನ .!

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಮಸ್ತಕವ ಮುಟ್ಟಿ ನೋಡಿದಡೆ,

ಮನೋಹರದಳಿವು ಕಾಣ ಬಂದಿತ್ತು!

ಮುಖಮಂಡಲವ ಮುಟ್ಟಿ ನೋಡಿದಡೆ,

ಮೂರ್ತಿಯ ಅಳಿವು ಕಾಣ ಬಂದಿತ್ತು!

ಕೊರಳ ಮುಟ್ಟಿ ನೋಡಿದಡೆ,

ಗರಳಧರನ ಇರವು ಕಾಣ ಬಂದಿತ್ತು!

ತೋಳುಗಳ ಮುಟ್ಟಿ ನೋಡಿದಡೆ,

ಶಿವನಪ್ಪುಗೆ ಕಾಣ ಬಂದಿತ್ತು!

ಉರಸ್ಥಲವ ಮುಟ್ಟಿ ನೋಡಿದಡೆ,

ಪರಸ್ಥಲದಂಗಲೇಪ ಕಾಣ ಬಂದಿತ್ತು

ಬಸಿರ ಮುಟ್ಟಿ ನೋಡಿದಡೆ,

ಬ್ರಹ್ಮಾಂಡವ ಕಾಣ ಬಂದಿತ್ತು!

ಗುಹ್ಯವ ಮುಟ್ಟಿ ನೋಡಿದಡೆ,

ಕಾಮದಹನ ಕಾಣ ಬಂದಿತ್ತು!

ಮಹಾಲಿಂಗ ತ್ರಿಪುರಾಂತಕದೇವಾ,

ಮಹಾದೇವಿಯಕ್ಕನ ನಿಲುವನರಿಯದೆಅಳುಪಿ ಕೆಟ್ಟೆನು.

 

-ಕಿನ್ನರಿ ಬ್ರಹ್ಮಯ್ಯ

--- -ಕಿನ್ನರಿ ಬ್ರಹ್ಮಯ್ಯ ಅವರ ವಚನ .!
Comments (0)
Add Comment