ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಡಿಸೆಂಬರ್ 9ರಂದು ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿಸೆಂಬರ್ 9ರಂದು ಬೆಳಗ್ಗೆ ದೇವರ ದರ್ಶನ ಮತ್ತು ವಿವಿಧ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ. ದೇವಾಲಯದಲ್ಲಿ 2023-24ನೇ ಸಾಲಿನ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಡಿಸೆಂಬರ್ 9ರಂದು ಶನಿವಾರ ಮೂಲ ಮೃತಿಕಾ ಪ್ರಸಾದ ತೆಗೆಯುವ ವಿಧಿವಿಧಾನ ಕಾರ್ಯಕ್ರಮ ಇರುವುದರಿಂದ ಭಕ್ತರಿಗೆ ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯ ವರೆಗೆ ದೇವರ ದರ್ಶನ ಮತ್ತು ಸೇವೆಗೆ ಅವಕಾಶವಿರುವುದಿಲ್ಲ ಎಂದು ದೇಗುಲದ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.

Comments (0)
Add Comment