ಕುನೋ ಪಾರ್ಕ್: ಮೂರು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾ ಚೀತಾ

ಶಿಯೋಪುರ್: ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದ ಚೀತಾವೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ.

ಈ ಸಂಬಂಧ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಜ್ವಾಲಾ ಎಂಬ ಹೆಸರಿನ ಚಿರತೆ ಮೂರು ಮುದ್ದಾದ ಮರಿಗಳಿಗೆ ಜನ್ಮ ನೀಡಿದೆ. ಇದಕ್ಕೂ ಮುನ್ನ ಅಂದರೆ ಕೆಲ ವಾರಗಳ ಹಿಂದೆಯಷ್ಟೇ ನಮೀಬಿಯಾದ ಚಿರತೆ ಆಶಾ ತನ್ನ ಮರಿಗಳಿಗೆ ಜನ್ಮ ನೀಡಿತ್ತು. ಸಚಿವ ಭೂಪೇಂದರ್ ಯಾದವ್ ಅವರು ತಮ್ಮ ‘X’ ಹ್ಯಾಂಡಲ್‌ನಲ್ಲಿ ತಾಯಿಯೊಂದಿಗಿರುವ ಚೀತಾ ಮರಿಗಳ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಚೀತಾ ಯೋಜನೆಯಡಿ ಜ್ವಾಲಾ ಸೇರಿದಂತೆ 8 ಚೀತಾಗಳನ್ನು 2022 ರ ಸೆಪ್ಟೆಂಬರ್ 17 ರಂದು ನಮೀಬಿಯಾದಿಂದ ತರಲಾಯಿತು.

 

Comments (0)
Add Comment