ಕೃಷ್ಣ ಕೇಳಿದ್ದು 5 ಗ್ರಾಮ, ನಾವು ಕೇಳುತ್ತಿರುವುದು 3 ಯಾತ್ರಾ ಸ್ಥಳ : ಮಥುರಾ ಹೋರಾಟದ ಸುಳಿವು ಕೊಟ್ಟ ಆದಿತ್ಯನಾಥ್

ಉತ್ತರ ಪ್ರದೇಶ : ಅಯೋಧ್ಯೆಯ ರಾಮಜನ್ಮಭೂಮಿ ಹೋರಾಟ ಸಕ್ಸಸ್ ಆದ ಬೆನ್ನಲ್ಲೇ, ಮಥುರಾದಲ್ಲಿರುವ ಶ್ರೀಕೃಷ್ಣ ಜನ್ಮಭೂಮಿಯೂ ಹಿಂದೂಗಳಿಗೆ ಮರಳಿ ಸಿಗಬೇಕು ಎಂಬ ಕೂಗು ಜೋರಾಗಿದೆ.

ಸದ್ಯ ಬುಧವಾರ ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮಹಾಭಾರತದಲ್ಲಿ ಶ್ರೀ ಕೃಷ್ಣನು ಪಾಂಡವರಿಗಾಗಿ ಕೇವಲ 5 ಗ್ರಾಮಗಳನ್ನು ಮಾತ್ರ ಕೇಳಿದ್ದ. ಆದರಿಂದು ನಾವು ಪವಿತ್ರ ಮೂರು ಸ್ಥಳಗಳನ್ನು ಮಾತ್ರ ಕೇಳುತ್ತಿದ್ದೇವೆ ಎಂದು ಹೇಳುವ ಮೂಲಕ ಅಯೋಧ್ಯೆ ಬಳಿಕ ಕಾಶಿ ಮತ್ತು ಮಥುರಾದಲ್ಲಿರುವ ಮಸೀದಿಗಳನ್ನು ಪಡೆದುಕೊಳ್ಳುವ ಸುಳಿವು ನೀಡಿದ್ದಾರೆ. ಇದೇ ವೇಳೆ ಕಾಶಿ ಮತ್ತು ಮಥುರಾ ವಿವಾದಿತ ಸ್ಥಳಗಳನ್ನೂ ಉಲ್ಲೇಖಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವೈಭವದಿಂದ ನಡೆದಿದ್ದು, ಇದೀಗ ಹಿಂದೂ ಧರ್ಮೀಯರ ಪಾಲಿನ ಪ್ರಸಿದ್ಧ ಯಾತ್ರಾಸ್ಥಳವಾಗಿ ಮಾರ್ಪಟ್ಟಿದೆ. ಇದೀಗ ಶ್ರೀಕೃಷ್ಣ ಜನ್ಮಭೂಮಿ ಭೂ ವಿವಾದದ ಪರಿಹಾರವು ಬಿಜೆಪಿಯ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ. ಅಯೋಧ್ಯೆ, ಕಾಶಿ ಮತ್ತು ಮಥುರಾಗೆ ಅನ್ಯಾಯವಾಗಿದೆ. ಈ ಹಿಂದೂ ಧಾರ್ಮಿಕ ಕೇಂದ್ರಗಳನ್ನು ಅಭಿವೃದ್ಧಿಪಡಿಸದ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) ಇದಕ್ಕೆ ಉತ್ತರಿಸಬೇಕು ಅಂತ ಯೋಗಿ ಆದಿತ್ಯನಾಥ್ ಹೇಳಿದ್ರು. ಅನ್ಯಾಯದ ಬಗ್ಗೆ ಮಾತನಾಡುವಾಗ ನಾವು 5000 ವರ್ಷಗಳ ಹಿಂದಿನ ವಿಷಯವನ್ನು ನೆನಪಿಸಿಕೊಳ್ಳಬೇಕು. ಆ ಸಮಯದಲ್ಲಿ ಪಾಂಡವರಿಗೂ ಅನ್ಯಾಯವಾಗಿತ್ತು. ಅದೇ ರೀತಿ ಅಯೋಧ್ಯೆ, ಕಾಶಿ ಮತ್ತು ಮಥುರಾದ ವಿಚಾರದಲ್ಲೂ ಅನ್ಯಾಯವಾಗಿದೆ ಅಂತ ಹೇಳಿದ್ದಾರೆ. ಈ ಮೂಲಕ ಬಿಜೆಪಿ ಸರ್ಕಾರದ ಮುಂದಿನ ಟಾರ್ಗೆಟ್ ಕಾಶಿ ಹಾಗೂ ಮಥುರಾ ಅನ್ನೋದನ್ನು ಸೂಚ್ಯವಾಗಿ ಹೇಳಿದ್ದಾರೆ.

Comments (0)
Add Comment