ಕೇಂದ್ರ ಸಚಿವರ ನಿವಾಸದಲ್ಲಿ ಯುವಕನ ಶವ ಪತ್ತೆ

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿರುವ ಕೇಂದ್ರ ಸಚಿವ ಮತ್ತು ಬಿಜೆಪಿ ಸಂಸದರೊಬ್ಬರ ಮನೆಯಲ್ಲಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ.

ಮೃತ ಯುವಕನನ್ನು ವಿಕಾಸ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ.

ಉತ್ತರ ಪ್ರದೇಶದ ಲಕ್ನೋದಲ್ಲಿ ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಮನೆಯಲ್ಲಿ ಈ ಘಟನೆ ನಡೆದಿದ್ದು ಸಚಿವರ ಪುತ್ರನ ಹೆಸರಿನಲ್ಲಿ ಪರವಾನಗಿ ಪಡೆದ ಪಿಸ್ತೂಲ್ ಕೂಡ ಸ್ಥಳದಲ್ಲಿ ಪತ್ತೆಯಾಗಿದೆ.

ಇನ್ನು ಈ ಘಟನೆಗೆ ಸಂಬಂಧಿಸಿ ಪೊಲೀಸರು ಸಚಿವರ ನಿವಾಸವನ್ನು ಶೋಧ ನಡೆಸಿದ್ದು, ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Comments (0)
Add Comment