ಕೇರಳ ಹತ್ಯೆ ಪ್ರಕರಣದ 15 ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಧೀಶೆಗೆ PFIನಿಂದ ಜೀವಬೆದರಿಕೆ..!

ಕೇರಳದಲ್ಲಿ ನಡೆದ ರಾಜಕೀಯ ಕೊಲೆ ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರಿಗೆ ಮರಣದಂಡನೆ ತೀರ್ಪು ನೀಡಿದ ಮಾವೇಲಿಕ್ಕರ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶರಿಗೆ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು, ಇದೀಗ ಈ ಆರೋಪದ ಮೇಲೆ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರದಂಡನೆಯ ತೀರ್ಪು ನೀಡಿದ ಬಳಿಕ ನ್ಯಾಯಾಧೀಶೆಗೆ ಜೀವ ಬೆದರಿಕೆ ಕರೆಗಳು ಬರಲಾರಂಭಿಸಿದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಭದ್ರತೆ ಒದಗಿಸಲಾಗಿದೆ. ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ-1 ರ ನ್ಯಾಯಾಧೀಶರಾದ ವಿಜಿ ಶ್ರೀದೇವಿ ಅವರು ಶಿಕ್ಷೆಯ ಪ್ರಮಾಣವನ್ನು ಘೋಷಿಸಿದ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳ ಮೂಲಕ ಬೆದರಿಕೆಗಳು ಬರಲಾರಂಭಿವೆ. ಈ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಆಕೆಯ ಸುರಕ್ಷತೆಗಾಗಿ ಭದ್ರತಾ ಕ್ರಮಗಳನ್ನು ಹೆಚ್ಚಿಸಿದ್ದಾರೆ. ಆಕೆಯ ವೈಯಕ್ತಿಕ ಸುರಕ್ಷತೆಗಾಗಿ ಸಬ್ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಆರು ಸದಸ್ಯರ ಭದ್ರತಾ ತಂಡ ನಿಯೋಜಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ನಿರಂತರ ಬೆದರಿಕೆಗಳು ಬಂದಿರುವುದರಿಂದ ಭದ್ರತೆಯನ್ನು ಇನ್ನೂ ಹೆಚ್ಚಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಡಿಜಿಪಿ ಕಚೇರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನ್ಯಾಯಾಧೀಶರಾದ ಶ್ರೀದೇವಿ ಪ್ರಕರಣವನ್ನು ಅಪರೂಪದ ಅಪರೂಪ ಎಂದು ವರ್ಗೀಕರಿಸಿದ್ದು, ಆರೋಪಿಗಳಾದ ಪಿಎಫ್‌ಐ ಕಾರ್ಯಕರ್ತರಾದ ನೈಸಾಮ್, ಅಜ್ಮಲ್, ಅನೂಪ್, ಮೊಹಮ್ಮದ್ ಅಸ್ಲಾಂ, ಅಬ್ದುಲ್ ಕಲಾಂ, ಸಫರುದ್ದೀನ್, ಮನ್ಶಾದ್, ಜಸೀಬ್ ರಾಜಾ, ನವಾಸ್, ಸಮೀರ್, ನಜೀರ್, ಜಾಕೀರ್ ಹುಸೇನ್, ಶಾಜಿಗೆ ಮರಣದಂಡನೆಯೋಮದಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು. ಅಲಪ್ಪುಳ ಬಾರ್ ಅಸೋಸಿಯೇಷನ್‌ನಲ್ಲಿ ವಕೀಲರು ಮತ್ತು ಬಿಜೆಪಿಯ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿದ್ದ ರಂಜಿತ್ ಶ್ರೀನಿವಾಸನ್ ಅವರನ್ನು ಡಿಸೆಂಬರ್ 19, 2021 ರಂದು, ಪಿಎಫ್‌ಐ ಸದಸ್ಯರು ಅಲಪ್ಪುಳದಲ್ಲಿರುವ ಶ್ರೀನಿವಾಸನ್ ಅವರ ನಿವಾಸಕ್ಕೆ ಬಲವಂತವಾಗಿ ಪ್ರವೇಶಿಸಿ, ಅವರ ಪತ್ನಿ ಮತ್ತು ತಾಯಿಯ ಸಮ್ಮುಖದಲ್ಲಿ ಭೀಕರವಾಗಿ ಕಡಿದು ಕೊಂದಿದ್ದರು.

Comments (0)
Add Comment