ಕ್ರಿಸ್ ಮಸ್ ಹಬ್ಬದ ನಿಮಿತ್ತ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ಬೆಂಗಳೂರು: ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್‌ಟಿಸಿ ಹೆಚ್ಚುವರಿ 1000 ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಡಿ. 22 ರಿಂದ ಡಿ. 24ರವರೆಗೆ ಈ ವಿಸೇಷ ಬಸ್ ಗಳು ಸಂಚರಿಸಲಿದ್ದು, ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲು ವ್ಯವಸ್ಥೆ ಕಲ್ಪಿಸಿದೆ.

ಹೊರ ರಾಜ್ಯಗಳಾದ ತಮಿಳುನಾಡು, ಕೇರಳದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್ ಗಳು ಸಂಚರಿಸಲಿದ್ದು, ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ,ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. www.ksrtc.in ವೆಬ್‌ಸೈಟ್‌ಗೆ ಮೂಲಕ ಆನ್‌ಲೈನ್  ಟಿಕೆಟ್ ಬುಕ್ ಮಾಡಬಹುದಾಗಿದೆ. ನಾಲ್ಕು ಹಾಗೂ ನಾಲ್ಕಕ್ಕಿಂತ ಹೆಚ್ಚಿನ ಟಿಕೆಟ್ ಕಾಯ್ದಿರಿಸಿದರೆ ಶೇ.5ರಷ್ಟು ರಿಯಾಯಿತಿ ಇದೆ. ಇನ್ನು ಹೋಗುವ ಹಾಗೂ ಬರುವ ಟಿಕೆಟ್ ಕಾಯ್ದಿರಿಸಿದರೆ ಶೇ.10ರಷ್ಟು ರಿಯಾಯಿತಿ ನೀಡಲಾಗಿದೆ.

Comments (0)
Add Comment